ಕರ್ನಾಟಕ

karnataka

ETV Bharat / state

ಬಳ್ಳಾರಿ: ಕಾರು-ಲಾರಿ ನಡುವೆ ಭೀಕರ ಅಪಘಾತ, ಮೂವರು  ಸ್ಥಳದಲ್ಲೇ  ಸಾವು - Bellary crime news

ನಿನ್ನೆ ರಾತ್ರಿ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿ 50ರ ಫ್ಲೈ ಓವರ್ ಮೇಲೆ ನೀರು ನಿಂತಿದ್ದೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಕಾರು ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಮೂವರು ಸ್ಥಳದಲ್ಲಿಯೇ ಸಾವನ್ನಪಿದ್ದಾರೆ.

Three dies on spot in accident at bellary
ಕಾರಿ-ಲಾರಿ ನಡುವೆ ಭೀಕರ ಅಪಘಾತ:

By

Published : May 17, 2020, 8:20 AM IST

ಬಳ್ಳಾರಿ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಬಸ್ ನಿಲ್ದಾಣದ ಬಳಿ ನಡೆದಿದೆ.

ನಿನ್ನೆ ರಾತ್ರಿ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿ 50ರ ಫ್ಲೈ ಓವರ್ ಮೇಲೆ ನೀರು ನಿಂತಿದ್ದೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಕಾರು ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಮೂವರು ಸ್ಥಳದಲ್ಲಿಯೇ ಸಾವನ್ನಪಿದ್ದಾರೆ.

ಕಾರಿ-ಲಾರಿ ನಡುವೆ ಭೀಕರ ಅಪಘಾತ

ಕಾರಿ​ನಲ್ಲಿದ್ದ ಚಾಲಕ ದೇವರಾಜ್ (21)ಹಾಗೂ ಭೀಮರಾಯ (38) ಅಂಜಲಿ ದೇವಿ ( 14) ಮೃತಪಟ್ಟಿದ್ದಾರೆ. ಇವರು ಮುದ್ದೇಬಿಹಾಳ ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ, ಕೊಟ್ಟೂರು ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details