ಹೊಸಪೇಟೆ :ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನದಾಸ್ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಮಂಡಿಸಿ ಚರ್ಚೆಗೆ ಒಳಪಡಿಸಬೇಕೆಂದು ದಲಿತ ಹಕ್ಕುಗಳ ಹೋರಾಟ ಸಮಿತಿ ಹಾಗೂ ಕರ್ನಾಟಕ ಸಮಿತಿ ಕಾರ್ಯಕರ್ತರು ಅರಣ್ಯ ಸಚಿವ ಆನಂದ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ಸರ್ಕಾರ ಎಸ್ಸಿ,ಎಸ್ಟಿ ಜನಾಂಗದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಪರಿಸ್ಥಿತಿ ಅರಿಯಲು ಹಾಗೂ ಪರಿಹಾರಕ್ಕಾಗಿ ಆಯೋಗ ರಚಿಸಿ ವರದಿ ನೀಡಲು ಸೂಚಿಸಿತ್ತು. ಆದರೆ, ಸರ್ಕಾರಗಳು ವರದಿ ಅನುಷ್ಠಾನ ಮಾಡಿಲ್ಲ. ಹಾಗಾಗಿ, ವರದಿಗಳ ಅಂಶಗಳನ್ನು ಚರ್ಚೆಗೆ ಒಳಪಡಿಸಿ ಜಾರಿಗೆ ತರಬೇಕೆಂದು ಆಗ್ರಹಿಸಿದರು.