ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 552 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 17,319 ಕ್ಕೆ ಏರಿಕೆಯಾಗಿದೆ.
ಬಳ್ಳಾರಿಯಲ್ಲಿಂದು 552 ಕೊರೊನಾ ಪಾಸಿಟಿವ್ ಕೇಸ್ ಪತ್ತೆ - ಬಳ್ಳಾರಿ ಕೊರೊನಾ ನ್ಯೂಸ್
ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 552 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.
Bellary
ಜಿಲ್ಲೆಯಲ್ಲಿ ಇಂದು ಒಂದೇ ದಿನ 552 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 11,406 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 211 ಮಂದಿ ಸಾವನ್ನಪ್ಪಿದ್ದು, 5,702 ಸಕ್ರಿಯ ಪ್ರಕರಣಗಳಿವೆ.
ಈ ದಿನ ಏಳು ಮಂದಿ ಕೊರೊನಾಗೆ ಸಾವನ್ನಪ್ಪಿದ್ದಾರೆ. ಅಂದಾಜು 522 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.