ಬಳ್ಳಾರಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿರುವ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಜಿಲ್ಲೆಯಲ್ಲಿಂದು ಸಂಜೆ ಪಂಜಿನ ಮೆರವಣಿಗೆ ನಡೆಸಿದರು.
ಡಿಕೆಶಿ ಬಂಧನಕ್ಕೆ ಖಂಡನೆ: ಕಾಂಗ್ರೆಸ್ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ - ಡಿಕೆಶಿ ಬಂಧನ
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಬಳ್ಳಾರಿಯಲ್ಲಿಂದು ಸಂಜೆ ಪಂಜಿನ ಮೆರವಣಿಗೆ ನಡೆಸಿದರು.
ನಗರದ ಡಬಲ್ ರಸ್ತೆಯಲ್ಲಿರುವ ಈಡಿಗರ ಹಾಸ್ಟೆಲ್ ಮುಂಭಾಗದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕೆಲಕಾಲ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಬಳಿಕ ಹಾಸ್ಟೆಲ್ ಮುಂಭಾಗ ರಸ್ತೆಯಿಂದ ಗಡಿಗಿ ಚನ್ನಪ್ಪ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದರು. ವಾದ್ಯ ಮೇಳದೊಂದಿಗೆ ಈ ಪಂಜಿನ ಮೆರವಣಿಗೆ ನಡೆದಿದ್ದು, ನಗರದ ಪ್ರಮುಖ ರಸ್ತೆಗಳಾದ ಗಡಿಗಿ ಚನ್ನಪ್ಪ, ಮೀನಾಕ್ಷಿ ವೃತ್ತ ಸೇರಿದಂತೆ ಇತರೆಡೆಗಳಲ್ಲಿ ಸಂಚರಿಸಿತು.
ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ನ ಪ್ರಬಲ ನಾಯಕರಾದ ಡಿ.ಕೆ.ಶಿವಕುಮಾರ್ ಅವರ ಮೇಲೆ ಅಸ್ತ್ರವನ್ನು ಪ್ರಯೋಗಿಸಿದ್ದಾರೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ. ಆಡಳಿತ ಯಂತ್ರದ ದುರ್ಬಳಕೆ ಹಿಂದಿನ ಉದ್ದೇಶದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಹೇಳಿದರು. ಅಂದಾಜು ನೂರಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.