ವಿಜಯನಗರ: ಟ್ರ್ಯಾಕ್ಟರ್ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಜರುಗಿದೆ.
ಚಿತ್ರದುರ್ಗ ಜಿಲ್ಲೆಯ ಹಾಲೇಶ (43) ಮೃತ ಟ್ರ್ಯಾಕ್ಟರ್ ಚಾಲಕ. ಈತ ಇಮಡಾಪುರದ ಹೊಸಹಳ್ಳಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ತೆರಳುತ್ತಿದ್ದಾಗ ಮುಂದೆ ಬರುತ್ತಿದ್ದ ಕಾರನ್ನು ಗಮನಿಸಿ ಪಕ್ಕಕ್ಕೆ ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಹಾಲೇಶ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವ ಆಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.