ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ಗೆ ಡಿಕ್ಕಿ ಹೊಡೆದು ಮಹಿಳೆ ಮೇಲೆ ಹರಿದ ಟ್ರ್ಯಾಕ್ಟರ್: ವಿಡಿಯೋ - ಬಳ್ಳಾರಿ ವಾಹನ ಅಪಘಾತ ನ್ಯೂಸ್
ಬಾದನಹಟ್ಟಿ ಗ್ರಾಮದಿಂದ ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಯರ್ರಂಗಳಿಗಿ ಗ್ರಾಮದ ಕಡೆಯಿಂದ ಅತಿವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಬಸವರಾಜ ಎಂಬಾತನು ಆ ಟ್ರ್ಯಾಕ್ಟರ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಕುರುಗೋಡು ತಾಲೂಕಿನ ಬಾದಹಟ್ಟಿ ಗ್ರಾಮದ ಈರಮ್ಮ (28) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಬಾದನಹಟ್ಟಿ ಗ್ರಾಮದಿಂದ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಯರ್ರಂಗಳಿಗಿ ಗ್ರಾಮದ ಕಡೆಯಿಂದ ಅತಿವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ಚಾಲಕ ಬಸವರಾಜ ಎಂಬಾತನು ಆ ಟ್ರ್ಯಾಕ್ಟರ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಬಳ್ಳಾರಿ ಗ್ರಾಮೀಣ ವಲಯದ ಡಿವೈಎಸ್ಪಿ ಅರುಣ್ ಕೋಳೂರು ಮತ್ತು ಪಿಎಸ್‌ಐ ಎಂ. ಕೃಷ್ಣಮೂರ್ತಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.