ಬಳ್ಳಾರಿ:ನೋಂದಣಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ, ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ, ವಿವಾಹ, ವೈದ್ಯಕೀಯ ಭತ್ಯೆ ಸೇರಿದಂತೆ ಇತರೆ ಸೌಲಭ್ಯಗಳನ್ನು ನೀಡಲಾಗುವುದು ಎಂದು ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್.ಎನ್.ಶಿವರಾಜ ಹೇಳಿದರು.
ನೋಂದಣಿ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ - workers' facilities
ನೋಂದಣಿ ಕಾರ್ಮಿಕರ ಮಕ್ಕಳಿಗೆ ಹಾಗೂ ಕುಟುಂಬಗಳಿಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಅವುಗಳ ಉಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕರ ಇಲಾಖೆ ಕಾರ್ಯನಿರ್ವಾಹಕ ಆರ್.ಎನ್.ರಮೇಶ್ ಹೇಳಿದರು.
![ನೋಂದಣಿ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ](https://etvbharatimages.akamaized.net/etvbharat/prod-images/768-512-4035103-thumbnail-3x2-bry.jpg)
Training to utilize workers' facilities
ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್.ಎನ್.ಶಿವರಾಜ
ಇಲ್ಲಿನ ಜಿಲ್ಲಾ ಕೈಗಾರಿಕ ಕೇಂದ್ರದ ಹತ್ತಿರದ ಸಿಂಡಿ ಗ್ರಾಮೀಣ ಸ್ವ ಉದ್ಯೋಗ ಸಭಾಂಗಣದಲ್ಲಿ ಸಿಂಡಿಕೇಟ್ ಬ್ಯಾಂಕ್ ಹಾಗೂ ಸಿಂಡಿ ಗ್ರಾಮೀಣ ಸ್ವ ಉದ್ಯೋಗ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕರ ತಿಂಗಳ ಅವಧಿ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರ ಕಾರ್ಮಿರ ಸರ್ವತೋಮುಖ ಅಭಿವೃದ್ಧಿಗೆ ಪ್ರತಿ ವರ್ಷವೂ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಕಾರ್ಮಿಕ ಕುಟುಂಬಗಳ ಕಾಳಜಿಯಿಂದ ಹಲವು ಧನ ಸೌಲಭ್ಯಗಳನ್ನು ನೀಡಿದೆ. ಅವುಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಹೇಳಿದರು.