ಬಳ್ಳಾರಿ:ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟಕ್ಕೆ ಮಂಗಳಮುಖಿಯರು ಸಾಥ್ ನೀಡಿದರು.
ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಪ್ರತಿಭಟನೆ: ಕನ್ನಡಪರ ಸಂಘಟನೆಗಳಿಗೆ ಮಂಗಳಮುಖಿಯರ ಸಾಥ್ - ಬಳ್ಳಾರಿ ಜಿಲ್ಲೆ ವಿಭಜನೆ
ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಗೆ ವಿರೋಧ ವ್ಯಕ್ತಪಡಿಸಿ ವಿವಿಧ ಕನ್ನಡಪರ ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ಮಂಗಳಮುಖಿಯರು ಭಾಗಿಯಾಗುವ ಮೂಲಕ ಜಿಲ್ಲೆಯ ವಿಭಜನೆಗೆ ವಿರೋಧ ವ್ಯಕ್ತಪಡಿಸಿದರು.
ಬಳ್ಳಾರಿ ಜಿಲ್ಲೆ ವಿಭಜನೆ
ನಗರದ ನಗರೂರು ನಾರಾಯಣರಾವ್ ಉದ್ಯಾನದ ಬಳಿ ಜಮಾಯಿಸಿದ್ದ ಕನ್ನಡಪರ ಸಂಘಟನೆಗಳ ಜೊತೆಗೂಡಿದ ಮಂಗಳಮುಖಿಯರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗುವ ಮೂಲಕ ಜಿಲ್ಲೆಯ ವಿಭಜನೆಗೆ ವಿರೋಧ ವ್ಯಕ್ತಪಡಿಸಿದರು.
ಬೃಹತ್ ಪ್ರತಿಭಟನೆ ನಡೆಸಿದ ಸಂಘಟನೆಗಳು, ಗಡಿಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಬ್ರಾಹ್ಮೀಣಿ ಸ್ಟ್ರೀಟ್ ರಸ್ತೆಯ ಮೂಲಕ ಡಿಸಿ ಕಚೇರಿಗೆ ಆಗಮಿಸಿ ಎಡಿಸಿ ಮಂಜುನಾಥ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.