ಬಳ್ಳಾರಿ: ಇಲ್ಲಿನ ಮುಂಡ್ರಿಗಿ ಬೈಪಾಸ್ ರಸ್ತೆಯಲ್ಲಿಂದು ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು! - ಬಳ್ಳಾರಿ ಅಪಘಾತ ಸುದ್ದಿ
ಬಳ್ಳಾರಿಯ ಮುಂಡ್ರಿಗಿ ಬೈಪಾಸ್ ರಸ್ತೆಯಲ್ಲಿಂದು ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಸಾವನ್ನಪ್ಪಿದ ಬೈಕ್ ಸವಾರ
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಮುಂಡ್ರಿಗಿ ನಿವಾಸಿ ಗೌಸುಖಾನ್(46) ಎಂಬುವವರನ್ನು ಮೃತ ವ್ಯಕ್ತಿಯೆಂದು ಗುರುತಿಸಲಾಗಿದೆ. ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಎದುರುಗಡೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಬೈಕ್ಗೆ ಲಾರಿ ಡಿಕ್ಕಿ ಹೊಡೆದಿದೆ.
ಇನ್ನು ಈ ಸಂಬಂಧ ಬಳ್ಳಾರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.