ಹೊಸಪೇಟೆ: ಎರಡು ದಿನಗಳಿಂದ ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಮಳೆ ತಗ್ಗಿದ್ದು, ಒಳ ಮತ್ತು ಹೊರ ಹರಿವಿನ ಪ್ರಮಾಣ ಕಡಿಮೆಯಾಗಿದೆ.
ತುಂಗಭದ್ರಾ ಜಲಾಶಯದ ಒಳ-ಹೊರ ಹರಿವು ಇಳಿಮುಖ - Tungabhadra dam outlet
ಸತತ ಎರಡು ದಿನಗಳಿಂದ ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಮಳೆ ತಗ್ಗಿದ್ದು, ಒಳ ಮತ್ತು ಹೊರ ಹರಿವಿನ ಪ್ರಮಾಣ ಕಡಿಮೆಯಾಗಿದೆ.
![ತುಂಗಭದ್ರಾ ಜಲಾಶಯದ ಒಳ-ಹೊರ ಹರಿವು ಇಳಿಮುಖ Tungabhadra dam inlet-outlet reduced](https://etvbharatimages.akamaized.net/etvbharat/prod-images/768-512-8501844-thumbnail-3x2-news.jpg)
ತುಂಗಭದ್ರಾ ಜಲಾಶಯದಲ್ಲಿ ಇಂದು 53,424 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ನದಿಗೆ 39,777 ಕ್ಯೂಸೆಕ್ ನೀರನ್ನು ಹರಿ ಬಿಡಲಾಗುತ್ತಿದೆ. ಜಲಾಶಯದ 12 ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರನ್ನು ಹರಿಸಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 1,632.50 ಅಡಿಗಳಷ್ಟು ನೀರಿದ್ದು, 98.932 ಟಿಎಂಸಿ ನೀರು ಸಂಗ್ರಹವಾಗಿದೆ.
ನಿನ್ನೆ ಜಲಾಶಯಕ್ಕೆ 75,510 ಕ್ಯೂಸೆಕ್ ನೀರಿನ ಒಳಹರಿವು ದಾಖಲಾಗಿತ್ತು. ಜಲಾಶಯದಿಂದ ನದಿಗೆ 66,707 ಕ್ಯೂಸೆಕ್ ನೀರನ್ನು ಹರಿಬಿಡಲಾಗಿತ್ತು. ಜಲಾಶಯ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಹಾಗಾಗಿ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ ಎಂದು ತುಂಗಭದ್ರಾ ಜಲಾಶಯ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಒಳಹರಿವು ಪ್ರಮಾಣ ಕಡಿಮೆಯಾಗಿದ್ದರಿಂದ ನದಿ ಪಾತ್ರದ ಜನರು ನಿಟ್ಟುಸಿರು ಬಿಡುವಂತಾಗಿದೆ.