ವಿಜಯನಗರ:ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಬಳಿ ಸಾರಿಗೆ ಸಂಸ್ಥೆ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ. ಬಸ್ ಗುದ್ದಿದ ರಭಸಕ್ಕೆ ಯುವಕ ಕಿರಣ್ (23) ಸ್ಥಳದಲ್ಲೇ ಸಾವನ್ನಪ್ಪಿದರೆ, ವೆಂಕಟೇಶ (25) ಎಂಬಾತ ಆಸ್ಪತ್ರೆಗೆ ಸಾಗಿಸುವ ವೇಳೆ ಅಸುನೀಗಿದ್ದಾನೆ.
ಸಾರಿಗೆ ಬಸ್ ಹೊಸಪೇಟೆಯಿಂದ ಬಳ್ಳಾರಿಗೆ ತೆರಳುತ್ತಿತ್ತು. ಬೈಕ್ ಸವಾರರು ಗಾದಿಗನೂರಿನ ಜಾತ್ರೆಯಲ್ಲಿ ಊಟ ಮುಗಿಸಿ, ತಮ್ಮ ಸ್ವಗ್ರಾಮ ಕಾಕುಬಾಳುಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.