ಹೊಸಪೇಟೆ(ವಿಜಯನಗರ): ಹೊಟ್ಟೆ ಪಾಡಿಗಾಗಿ ಗುಳೆಗೆ ಹೊರಟಿದ್ದ ಯುವಕರ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಮೊರಬ ಕ್ರಾಸ್ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ: ಹೊಸಪೇಟೆಯಲ್ಲಿ ಇಬ್ಬರು ಬೈಕ್ ಸವಾರರು ದುರ್ಮರಣ - Hospete Crime news
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಮೊರಬ ಕ್ರಾಸ್ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ
ಶಂಕರ್ ನಾಯ್ಕ್( 30) ಪೀಕ್ಯಾ ನಾಯ್ಕ್( 50) ಮೃತರು. ಇವರು ಕೂಡ್ಲಿಗಿಯ ಗೋವಿಂದಗಿರಿ ತಾಂಡಾದಿಂದ ಮಂಡ್ಯಕ್ಕೆ ಕಬ್ಬು ಕಟಾವಿಗೆ ಗುಳೆ ಹೊರಟಿದ್ದರು. ಈ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ದುರ್ಘಟನೆ ನಡೆದಿದೆ.
ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.