ಬಳ್ಳಾರಿ: ಜಿಲ್ಲೆಯ ಕೊಟ್ಟೂರು ತಾಲೂಕಿನ ಹಿರೆವಡೇರಹಳ್ಳಿ ಬಳಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕೊಟ್ಟೂರು ಬಳಿ ಭೀಕರ ಕಾರು ಅಪಘಾತ: ಇಬ್ಬರ ದುರ್ಮರಣ - kannadanews
ಬಳ್ಳಾರಿ ಜಿಲ್ಲೆಯ ಕೊಟ್ಟೂರು ಬಳಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರು ಅಪಘಾತದಲ್ಲಿ ಇಬ್ಬರು ಯುವಕರ ಸಾವು
ಕೊಟ್ಟೂರಿನಿಂದ ಉಜ್ಜಿನಿಗೆ ಹೋಗುತ್ತಿದ್ದ ಕಾರು ಹಿರೆವಡೇರಹಳ್ಳಿ ಕ್ರಾಸ್ನಲ್ಲಿ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೊಟ್ಟೂರಿನ ಸಂತೋಷ (30), ನಡುಮಾವಿನ ಹಳ್ಳಿ ಬಸವರಾಜ (25) ಎಂಬುವವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಅಪಘಾತದ ತೀವ್ರತೆಗೆ ಸಂತೋಷ ಮತ್ತು ಬಸವರಾಜ ಕಾರಿನಲ್ಲಿ ಸಿಕ್ಕಿಹಾಕಿಕೊಂಡಿದ್ದು, ಸಾರ್ವಜನಿಕರು ಮೃತರ ದೇಹಗಳನ್ನು ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್ಐ ಎ.ಕಾಳಿಂಗ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ರವೀಂದ್ರ ಕುರುಬಗಟ್ಟಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.