ವಿಜಯನಗರ: ಸಾರಿಗೆ ಬಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಆಟೋದಲ್ಲಿದ್ದ ಇಬ್ಬರು ಮೃತಪಟ್ಟು ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರೆ ಕ್ರಾಸ್ ಬಳಿ ನಡೆದಿದೆ.
ಕೂಡ್ಲಿಗಿ ಎಸ್ಎವಿಟಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಕಾಂ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಈಚಲಬೊಮ್ಮನಹಳ್ಳಿಯ ಪುಷ್ಪಾಲತಾ (20) ಗಂಭೀರವಾಗಿ ಗಾಯಗೊಂಡು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಅಪಘಾತ ಸ್ಥಳದಲ್ಲಿ ಬಿದ್ದು ತೀವ್ರ ಗಾಯಗೊಂಡಿದ್ದ ಮೀನಾಕ್ಷಿ (38) ಎಂಬವರನ್ನು ಬಳ್ಳಾರಿಯ ವಿಮ್ಸ್‌ಗೆ ಕರೆದೊಯ್ಯುವಾಗ ರಾಂಪುರ ಹತ್ತಿರದ ಮಾರ್ಗಮಧ್ಯೆ ಮೃತಪಟ್ಟರು.