ಬಳ್ಳಾರಿ:ಗಣಿ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ತಾಲೂಕಿನ ಶಿವಪುರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಿಲ್ಲರಪೇಟೆ ನಿವಾಸಿ ಚಾಂದಬಾಷಾ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಬೈಕ್ನಲ್ಲಿ ಬಳ್ಳಾರಿಯಿಂದ ನೆರೆಯ ಆಂಧ್ರಪ್ರದೇಶದ ಆಲೂರಿಗೆ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮೋಕಾ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.