ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯಿತಿಯ ಇಬ್ಬರು ಸದಸ್ಯರು ಮಹಾಮಾರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಕೂಡ್ಲಿಗಿ ಪಟ್ಟಣ ಪಂಚಾಯಿತಿಯ ಇಬ್ಬರು ಹಾಲಿ ಸದಸ್ಯರು ಕೊರೊನಾಗೆ ಬಲಿ - corona virus
ಕಳೆದ ಆಗಸ್ಟ್ ತಿಂಗಳಲ್ಲೇ ಮಹಾಮಾರಿ ಕೋವಿಡ್ ಸೋಂಕಿಗೆ ಈ ಇಬ್ಬರು ಸದಸ್ಯರು ಸಾವನ್ನಪ್ಪಿದ್ದು, ಪಟ್ಟಣದ ಜನರಲ್ಲಿ ಇನ್ನೂ ಕೂಡ ಆತಂಕ ಮನೆಮಾಡಿದೆ.
ಕೂಡ್ಲಿಗಿ ಪಟ್ಟಣ ಪಂಚಾಯಿತಿ ಒಂದನೇ ವಾರ್ಡಿನ ಸದಸ್ಯ ಹಾಗೂ ಹದಿಮೂರನೇ ವಾರ್ಡಿನ ಸದಸ್ಯೆ ಕೋವಿಡ್ ಸೋಂಕಿಗೆ ಬಲಿಯಾಗಿರೋದು ಪಟ್ಟಣ ಪಂಚಾಯಿತಿ ಸದಸ್ಯರಲ್ಲಿ ಆತಂಕ ಹೆಚ್ಚಿಸಿದೆ.
ಕಳೆದ ಆಗಸ್ಟ್ ತಿಂಗಳಲ್ಲೇ ಮಹಾಮಾರಿ ಕೋವಿಡ್ ಸೋಂಕಿಗೆ ಈ ಇಬ್ಬರು ಸದಸ್ಯರು ಸಾವನ್ನಪ್ಪಿದ್ದು, ಪಟ್ಟಣ ಪಂಚಾಯಿತಿ ಅಧಿಕಾರದ ಚುಕ್ಕಾಣೆ ಹಿಡಿಯುವ ಪಕ್ಷದ ಸದಸ್ಯರ ಸಂಖ್ಯಾಬಲ ಕುಗ್ಗಿದೆಯಲ್ಲದೇ, ಸದಸ್ಯರೆಲ್ಲರಲ್ಲೂ ಆತಂಕ ಮನೆ ಮಾಡಿದೆ. ಅತೀವ ಉಸಿರಾಟ ತೊಂದರೆ ಸೇರಿದಂತೆ ನಾನಾ ಕಾಯಿಲೆಯಿಂದ ಬಳಲುತ್ತಿದ್ದ ಈ ಇಬ್ಬರು ಸದಸ್ಯರು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ಸಾವಿಗಿಡಾಗಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.