ಬಳ್ಳಾರಿ: ಬಹಿರ್ದೆಸೆಗೆ ಹೋಗುತ್ತಿದ್ದ ಇಬ್ಬರು ಯುವತಿಯರು ರೈಲಿಗೆ ಸಿಲುಕಿ ಮೃತ ಪಟ್ಟಿರುವ ಘಟನೆ ತಾಲೂಕಿನ ತೆಗ್ಗಿನ ಬೂದಿಹಾಳ್ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
ಪ್ರಭಾವತಿ (16) ಮತ್ತು ಸ್ವಾತಿ(21) ಮೃತರು. ಇವರಿಬ್ಬರು ಅಕ್ಕಪಕ್ಕದ ಮನೆಯವರಾಗಿದ್ದು, ಸಂಜೆ ಬಹಿರ್ದೆಸೆಗೆ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ದುರಂತ ಸಂಭವಿಸಿದೆ.