ವಿಜಯನಗರ: ಹೊಸಪೇಟೆ ತಾಲೂಕಿನ ಹಂಪಿ ಪುರಂದರದಾಸರ ಮಂಟಪದ ಸಮೀಪ ತುಂಗಭದ್ರಾ ನದಿಯಲ್ಲಿ ಈಜಾಡಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಬೆಂಗಳೂರಿನ ಹರೀಶ್ (18) ಮತ್ತು ಜೀವನ್ (18) ನೀರುಪಾಲಾಗಿರುವ ಯುವಕರು.
ಸ್ನೇಹಿತರೊಂದಿಗೆ ಹಂಪಿ ಪ್ರವಾಸಕ್ಕೆಂದು ತೆರಳಿದ್ದ ಯುವಕರು ಪುರಂದರದಾಸರ ಮಂಟಪದ ಬಳಿ ಹರಿಯುತ್ತಿರುವ ನದಿಯಲ್ಲಿ ಈಜಲು ತೆರಳಿದ್ದು, ಈ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.