ಹೊಸಪೇಟೆ: ಕೂಡ್ಲಿಗಿ ತಾಲೂಕಿನ ಕಾನಹೊಸಳ್ಳಿಯ ಇಮಡಾಪುರದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಿನ್ನೆ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು - ಹೊಸಪೇಟೆ ಬೈಕ್ ಸವಾರ ಸಾವು
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕೂಡ್ಲಿಗಿ ತಾಲೂಕಿನ ಕಾನಹೊಸಳ್ಳಿಯ ಇಮಡಾಪುರದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ.
ದೊಡ್ಡಚಿತ್ತಪ್ಪ
ಗೊಲ್ಲರಹಟ್ಟಿಯ ಅಮರದೇವರಗುಡ್ಡದ ದೊಡ್ಡಚಿತ್ತಪ್ಪ (40) ಮೃತ ವ್ಯಕ್ತಿ.
ಅಪಘಾತವಾದ ತಕ್ಷಣ ಸ್ಥಳೀಯರು ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಕಾನಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.