ಬಳ್ಳಾರಿ: ರಾಜ್ಯ ಸರ್ಕಾರ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನಿಗದಿಪಡಿಸಿರುವುದು ಹಾವು ಸಾಯಬಾರದು ಕೋಲು ಮುರಿಯಬಾರದು ಎಂಬಂತಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಪತ್ರೇಶ ಹಿರೇಮಠ ದೂರಿದ್ದಾರೆ.
ಎಪಿಎಂಸಿಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯ - urge to open maize buying center at APMC
ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಬದಲಾಗಿ ಎಪಿಎಂಸಿ ಮಾರುಕಟ್ಟೆಗಳಲ್ಲೇ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವಂತೆ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಪತ್ರೇಶ ಹಿರೇಮಠ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸಮಿತಿ ವಕ್ತಾರ ಪತ್ರೇಶ ಹಿರೇಮಠ
ನಗರದಲ್ಲಿ ಮಾತನಾಡಿ, ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಮೆಕ್ಕೆಜೋಳ ಖರೀದಿಸಲು ಸರ್ಕಾರ ಸೂಚಿಸಿದೆ. ಆದರೆ, ಅದು ಧಾರವಾಡದ ಪಶು ಆಹಾರ ಸಂಸ್ಕರಣ ಘಟಕದ ಸೂಚನೆಯ ಮೇರೆಗೆ ಖರೀದಿಸಲಾಗುತ್ತದೆ. ಇದರಿಂದ ರೈತರು ಮತ್ತಷ್ಟು ಆರ್ಥಿಕ ಸಂಕಷ್ಟ ಎದುರಿಸುವ ಸಾಧ್ಯತೆಯಿದೆ ಎಂದು ಹೇಳಿದರು.
ಆದ್ದರಿಂದ ರಾಜ್ಯ ಸರ್ಕಾರ ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಸ್ಥಳೀಯ ಎಪಿಎಂಸಿ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.