ಕರ್ನಾಟಕ

karnataka

By

Published : Dec 28, 2019, 5:52 PM IST

ETV Bharat / state

ಶ್ರೀರಾಮುಲು ಅಥವಾ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಒತ್ತಾಯ

ಪರಿಶಿಷ್ಟ ಪಂಗಡ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ 2020ರ ಫೆ. 9ರಿಂದ ಎರಡು ದಿನಗಳ ಕಾಲ ರಾಜ್ಯಮಟ್ಟದ ವಾಲ್ಮೀಕಿ ಜಾತ್ರೆ ನಡೆಯಲಿದೆ ಎಂದು ವಾಲ್ಮೀಕಿ ಗುರು ಪೀಠದ ಪೀಠಾಧ್ಯಕ್ಷ ವಾಲ್ಮೀಕಿ ಪ್ರಸನ್ನಾಂದ ಸ್ವಾಮೀಜಿ ತಿಳಿಸಿದರು.

Valmiki Prasanananda Swamy
ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿ

ಬಳ್ಳಾರಿ:ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಡಿಸಿಎಂ ಸ್ಥಾನವನ್ನು ರಮೇಶ್ ಜಾರಕಿಹೊಳಿ ಅಥವಾ ಬಿ.ಶ್ರೀರಾಮುಲು ಈ ಇಬ್ಬರಲ್ಲಿ ಒಬ್ಬರಿಗೆ ಕೊಟ್ಟರೂ ಸರಿ ಎಂದು ವಾಲ್ಮೀಕಿ ಗುರು ಪೀಠದ ಪೀಠಾಧ್ಯಕ್ಷ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

ನಗರದ ಪ್ರವಾಸಿ ಮಂದಿರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯಕ್ಕೆ 7.5ರಷ್ಟು ಮೀಸಲಾತಿ ಹೆಚ್ಚಿಸಬೇಕು. ರಾಜ್ಯದ ನಾಲ್ಕನೇ ಅತಿ ದೊಡ್ಡ ಸಮುದಾಯವಾಗಿರುವ ವಾಲ್ಮೀಕಿ ಸಮುದಾಯದ ಆರ್ಥಿಕ, ರಾಜಕೀಯ, ಸಾಮಾಜಿಕ ಏಳಿಗೆಗಾಗಿ ಪೀಠ ಸ್ಥಾಪನೆ ಮಾಡಲಾಗ್ತಿದೆ ಎಂದರು. ಪರಿಶಿಷ್ಟ ಪಂಗಡ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ 2020ರ ಫೆ. 9ರಿಂದ ಎರಡು ದಿನಗಳ ಕಾಲ ರಾಜ್ಯಮಟ್ಟದ ವಾಲ್ಮೀಕಿ ಜಾತ್ರೆ ನಡೆಯಲಿದೆ ಎಂದು ತಿಳಿಸಿದರು.

ಅಸಂಘಟಿತ ಸಮುದಾಯದ ಸಂಘಟನೆಗಾಗಿ 11 ವರ್ಷಗಳಿಂದ ರಾಜ್ಯದಾದ್ಯಂತ ಓಡಾಡಿ ಸಮುದಾಯದ ಸಂಘಟನೆ ಮಾಡಲಾಗಿದೆ. ಇಲ್ಲಿಯವರೆಗೆ 115 ತಾಲೂಕುಗಳ ಪ್ರವಾಸ ಆಗಿದೆ ಎಂದು ಹೇಳಿದರು.

ಎಸ್ಸಿ, ಎಸ್ಟಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ:

ಬೇರೆ ಜಾತಿಯವರು ನಕಲಿ ಪ್ರಮಾಣಪತ್ರ ಪಡೆದು ಅಕ್ರಮವಾಗಿ ಸೌಲಭ್ಯ ಪಡೆಯುತ್ತಿದ್ದಾರೆ. ಸರ್ಕಾರ ಇದನ್ನು ತಡೆಯಬೇಕು. ಪ್ರತ್ಯೇಕ ಸಚಿವಾಲಯ ರಚಿಸಬೇಕು. ಹಂಪಿ ವಿವಿಗೆ ವಾಲ್ಮೀಕಿ ಹೆಸರು ನಾಮಕರಣ ಮಾಡಬೇಕು. ರಾಮನ ಹೆಸರು ಹೇಳಿ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಅಧಿಕಾರ ಪಡೆದಿದ್ದಾರೆ. ರಾಮ ಮಂದಿರ ನಿರ್ಮಾಣವಾಗುತ್ತಿರುವ ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ ನಿರ್ಮಿಸಬೇಕು ಎಂದು ಅವರು ಒತ್ತಾಯಿಸಿದರು.

ಸಮುದಾಯದ ಅಭಿವೃದ್ಧಿಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯ

ಜೂನ್ 9ರಂದು ರಾಜನಹಳ್ಳಿಯಿಂದ ರಾಜಧಾನಿ ಬೆಂಗಳೂರಿಗೆ ಜೂನ್ 25ರಂದು ಬೃಹತ್ ಹೋರಾಟ ನಡೆಸಿದ ಪರಿಣಾಮ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು‌. ಬೆಂಗಳೂರು, ಕಲಬುರಗಿಯಲ್ಲಿ ಸಭೆ ಕರೆದು ಮಾಹಿತಿ ಪಡೆದಿದ್ದಾರೆ. ಜ. 31ರೊಳಗೆ ವರದಿ ನೀಡಿ, ಜಾತ್ರೆಯ ಸಂದರ್ಭದಲ್ಲಿ ಮೀಸಲಾತಿ ಹೆಚ್ಚಳಕ್ಕೆ ಘೋಷಿಸಬೇಕೆಂದು ಒತ್ತಾಯಿಸಿದರು.

ABOUT THE AUTHOR

...view details