ಹೊಸಪೇಟೆ:ನಗರದ ಚಿತ್ತವಾಡ್ಗಿಯಲ್ಲಿ ಹಳೆಯ ಬುನಾದಿ ಮೇಲೆ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಕಾಮಗಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಹಳೆಯ ಬುನಾದಿ ಮೇಲೆ ಆಸ್ಪತ್ರೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಸಂಘಟನೆಗಳ ಆಕ್ರೋಶ ಹಿಂದಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಹಳೆಯದಾಗಿತ್ತು. ಅದನ್ನು ಕೆಡವಿ ಜಿಲ್ಲಾ ಖನಿಜ ನಿಧಿ(ಡಿಎಂಎಫ್) 36 ಲಕ್ಷ ರೂ. ಅನುದಾನದಲ್ಲಿ ಹೊಸ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿತ್ತು. ಆದರೆ, ಈಗ ಹಳೆಯ ಬುನಾದಿಯಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡುತ್ತಿರುವುದು ವಿವಾವದಕ್ಕೆ ಕಾರಣವಾಗಿದೆ.
ಓದಿ: skoch award ಮುಡಿಗೇರಿಸಿಕೊಂಡ ಸಂಡೂರು ಸ್ವಯಂ ಶಕ್ತಿ ಯೋಜನೆ
ಈಟಿವಿ ಭಾರತದೊಂದಿಗೆ ಸಿಪಿಐ(ಎಂ) ಮುಖಂಡ ಕೆ.ಎಂ.ಸಂತೋಷ ಮಾತನಾಡಿ, ಅವೈಜ್ಞಾನಿಕವಾಗಿ ಆಸ್ಪತ್ರೆ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದೆ. 75 ವರ್ಷದ ಹಳೆಯ ಬುನಾದಿಯಲ್ಲಿ ಹೊಸ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಹಾಗಾಗಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ. ಕೂಡಲೇ ಯೋಜನೆಯನ್ನು ಬದಲಾಯಿಸಬೇಕು ಎಂದು ಆಗ್ರಹಿಸಿದರು.
ತಾಲೂಕು ವೈದ್ಯಾಧಿಕಾರಿ ಡಾ.ಡಿ.ಭಾಸ್ಕರ್ ಪ್ರತಿಕ್ರಿಯಿಸಿ, ಇಂಜಿನಿಯರ್ಗಳ ಯೋಜನೆಯಂತೆ ಹೊಸ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅವೈಜ್ಞಾನಿಕ ಕಾಮಗಾರಿ ಕುರಿತು ಇಂಜಿನಿಯರ್ಗಳು ಖಚಿತಪಡಿಸಬೇಕು. ಈ ಕುರಿತು ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.