ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ 24ನೇ ದಿನಕ್ಕೆ ಕಾಲಿಟ್ಟಿದೆ.
ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟಕ್ಕೆ ವಿವಿಧ ಸಂಘಟನೆಗಳ ಬೆಂಬಲ
ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟಕ್ಕೆ ವೀರ ಕನ್ನಡಿಗರ ರಕ್ಷಣಾ ವೇದಿಕೆ, ಜಿಲ್ಲಾ ಶಿವಶರಣ ಮೇದಾರ ಕೇತಯ್ಯ ಸಂಘದ ಪದಾಧಿಕಾರಿಗಳು ಬೆಂಬಲ ಸೂಚಿಸಿದ್ದಾರೆ.
ವೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಿಲ್ಲಾ ಶಿವಶರಣ ಮೇದಾರ ಕೇತಯ್ಯ ಸಂಘದ ಪದಾಧಿಕಾರಿಗಳು ಈ ದಿನದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ನಗರದ ಡಿಸಿ ಕಚೇರಿಯ ಎದುರು ಸ್ಥಾಪಿಸಲಾದ ತಾತ್ಕಾಲಿಕ ಟೆಂಟ್ನಲ್ಲಿ ನಾನಾ ಸಂಘಟನೆಗಳ ಮುಖಂಡರೊಂದಿಗೆ ಪುರೋಹಿತರ ಸಂಘದ ಪದಾಧಿಕಾರಿಗಳು ಭಾಗವಹಿಸಿ ಕೆಲಕಾಲ ರಾಜ್ಯ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡೋದು ತರವಲ್ಲ. ಭಾಷಾವಾರು ವಿಂಗಡಣೆ ವೇಳೆಯಲ್ಲಿ ಬಳ್ಳಾರಿ ಜಿಲ್ಲೆಯನ್ನು ಅಖಂಡವಾಗಿಯೇ ಉಳಿಸಲಾಗಿತ್ತು. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ನೂತನ ವಿಜಯನಗರ ಜಿಲ್ಲೆ ರಚನೆಯನ್ನು ಕೈ ಬಿಡಬೇಕೆಂದು ವೀರ ಕನ್ನಡಿಗರ ರಕ್ಷಣಾ ವೇದಿಕೆ ಅಧ್ಯಕ್ಷ ಶೇಖರ ಆಗ್ರಹಿಸಿದ್ದಾರೆ.