ಬಳ್ಳಾರಿ:ಗಣಿನಾಡು ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿ, ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಮಾನವೀಯ ಅಂತ್ಯಸಂಸ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೊರೊನಾಕ್ಕೆ ಬಲಿಯಾದವರ ಅಮಾನವೀಯ ಅಂತ್ಯಸಂಸ್ಕಾರದ ವಿರುದ್ಧ ವಾಟಾಳ್ ಪ್ರತಿಭಟನೆ - Vatal Nagaraj protest
ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಮಾನವೀಯ ಅಂತ್ಯಸಂಸ್ಕಾರದ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಅವರು ಕಾಯಿ ಹೊಡೆದು, ಕರ್ಪೂರ ಹಚ್ಚಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಲ್ಲಿಸಿದರು.
ಕೊರೊನಾಕ್ಕೆ ಬಲಿಯಾದವರ ಅಮಾನವೀಯ ಅಂತ್ಯಸಂಸ್ಕಾರದ ವಿರುದ್ಧ ವಾಟಾಳ್ ಪ್ರತಿಭಟನೆ
ನಗರದಲ್ಲಿ ಕೊರೊನಾ ಪಾಸಿಟಿವ್ನಿಂದ ಮೃತಪಟ್ಟ ಎಂಟು ಜನರ ಮೃತ ದೇಹವನ್ನು ಅಮಾನವೀಯವಾಗಿ ಸಂಸ್ಕಾರ ಮಾಡಿದ್ದನ್ನು ವಿರೋಧಿಸಿದರು. ಈ ವೇಳೆ ಅವರು ಕಾಯಿ ಹೊಡೆದು, ಕರ್ಪೂರ ಹಚ್ಚಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಲ್ಲಿಸಿದರು.
ಇಂತಹ ನಿರ್ಲಕ್ಷ್ಯಕ್ಕೆ ಕಾರಣರಾಗಿರುವ ಜಿಲ್ಲೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸೇರಿದಂತೆ ಶಾಸಕರು ಕೂಡ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.