ಬಳ್ಳಾರಿ:ಜಿಲ್ಲೆಯಾದ್ಯಂತ ಕೋವಿಡ್ -19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬೆಡ್ಗಳ ಕೊರತೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಸಕಲ ತಯಾರಿ ಮಾಡಿಕೊಂಡಿದೆ. ಇನ್ಮುಂದೆ ಕೋವಿಡ್ ಸೋಂಕಿತರಲ್ಲದ ರೋಗಿಗಳಿಗೂ ಕೂಡ ಈ ವೆಂಟಿಲೇಟರ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.
ಜಿಲ್ಲೆಯ ಡಿಸಿ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕಿತರಿಗೆ ಯಾವುದೇ ಬೆಡ್ ಹಾಗೂ ವೆಂಟಿಲೇಟರ್ ಕೊರತೆಯಾಗದಂತೆ ನೋಡಿಕೊಳ್ಳಲು ಮುನ್ನೆಚ್ಚರಿಕೆ ವಹಿಸಲಾಗಿದೆ. ಇದಲ್ಲದೇ, ಈ ದಿನ ರಾಜ್ಯ ಸರ್ಕಾರದಿಂದ ಬರುವ ಅಂದಾಜು 25 ಹೊಸ ವೆಂಟಿಲೇಟರ್ಗಳನ್ನು ನಾನ್ ಕೋವಿಡ್ ರೋಗಿಗಳಿಗೆ ಬಳಸಲು ಚಿಂತನೆ ನಡೆಸಲಾಗಿದೆ. ಬಳ್ಳಾರಿಯ ವಿಮ್ಸ್ ಮತ್ತು ಡೆಂಟಲ್ ಕಾಲೇಜಿನಲ್ಲಿ ಈ ನಾನ್ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿಯೇ ಅಗತ್ಯ ಬೆಡ್ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.