ಕರ್ನಾಟಕ

karnataka

ETV Bharat / state

ಸೆಪ್ಟೆಂಬರ್ 21 ರಂದು ರೈತರಿಂದ ವಿಧಾನಸೌಧ ಮುತ್ತಿಗೆ, ಅಹೋರಾತ್ರಿ ಸತ್ಯಾಗ್ರಹ!! - ಅಹೋರಾತ್ರಿ ಸತ್ಯಾಗ್ರಹ

ಪಿಎಂ ನರೇಂದ್ರ ಮೋದಿಯವರು ಕಾರ್ಪೊರೇಟ್ ಮತ್ತು ಬಹುರಾಷ್ಟ್ರೀಯ ಕಂಪನಿಗಳಿಗೆ ರತ್ನಗಂಬಳಿ ಹಾಸುವ ಕೆಲಸ ಮಾಡುತ್ತಿದ್ದಾರೆ. ಆರು ಕಾಯ್ದೆಗಳನ್ನು ರದ್ದು ಪಡಿಸುವವರೆಗೂ ಪ್ರತಿಭಟನೆ ಮಾಡುತ್ತೇವೆ..

ಸತ್ಯಾಗ್ರಹ
ಸತ್ಯಾಗ್ರಹ

By

Published : Sep 18, 2020, 5:26 PM IST

ಬಳ್ಳಾರಿ :ಭೂ ಸುಧಾರಣೆ, ಎಪಿಎಂಸಿ, ವಿದ್ಯುತ್ ಕಾಯ್ದೆ ಸೇರಿ ಹಲವು ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ವತಿಯಿಂದ ಸೆ.21ರಂದು ವಿಧಾನಸೌಧ ಮುತ್ತಿಗೆ ಹಾಕಿ ಅಹೋರಾತ್ರಿ ಸತ್ಯಾಗ್ರಹ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರನ್ನು ಒಕ್ಕಲು ಎಬ್ಬಿಸುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತಿವೆ. ಕೊರೊನಾ ವೈರಸ್ ನೆಪ ಹೇಳಿ ಜನರನ್ನು ಮನೆಯಲ್ಲಿರಿಸಿ ಆರು ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದ್ದಾರೆ. ಅದಕ್ಕೆ ರೈತ ಸಂಘಟನೆಗಳ ವಿರೋಧವಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ರೈತರ ಆಕ್ರೋಶ..

ಪಿಎಂ ನರೇಂದ್ರ ಮೋದಿಯವರು ಕಾರ್ಪೊರೇಟ್ ಮತ್ತು ಬಹುರಾಷ್ಟ್ರೀಯ ಕಂಪನಿಗಳಿಗೆ ರತ್ನಗಂಬಳಿ ಹಾಸುವ ಕೆಲಸ ಮಾಡುತ್ತಿದ್ದಾರೆ. ಆರು ಕಾಯ್ದೆಗಳನ್ನು ರದ್ದು ಪಡಿಸುವವರೆಗೂ ಪ್ರತಿಭಟನೆ ಮಾಡುತ್ತೇವೆ ಎಂದರು‌.

ABOUT THE AUTHOR

...view details