ಕರ್ನಾಟಕ

karnataka

ವಿಜಯನಗರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ

ಇಂದು ಸಂಜೆ ವೇಳೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಇದಕ್ಕೂ ಮುನ್ನ ಹೊಸಪೇಟೆ ನಗರದ ವಿವಿಧ ವಾರ್ಡ್​ಗಳಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸಿದರು.

By

Published : Dec 3, 2019, 4:25 PM IST

Published : Dec 3, 2019, 4:25 PM IST

campaign
ಪ್ರಚಾರ

ಬಳ್ಳಾರಿ:ಜಿಲ್ಲೆಯ ವಿಜಯನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆವೇಳೆಗೆ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದ್ದು, ಇದಕ್ಕೂ ಮುನ್ನ ಕಾಂಗ್ರೆಸ್​, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

ಪ್ರಚಾರದಲ್ಲಿ ತೊಡಗಿರುವ ಅಭ್ಯರ್ಥಿಗಳು

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಪರ ಕಂಪ್ಲಿ ಶಾಸಕ ಜೆ.ಎನ್. ಗಣೇಶ, ಎಐಸಿಸಿ ಕಾರ್ಯದರ್ಶಿ ಡಾ. ಶೈಲಜನಾಥ ಶಾಕೆ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಶಾಸಕ ಈ ತುಕರಾಂ, ಮಾಜಿ ಶಾಸಕ ಅನಿಲ್ ಹೆಚ್.ಲಾಡ್, ಜಿಲ್ಲಾ ಕಾಂಗ್ರೆಸ್ ಸಮಿತಿ (ಗ್ರಾಮಾಂತರ) ಅಧ್ಯಕ್ಷ ಬಿ.ವಿ. ಶಿವಯೋಗಿ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜೆ.ಎಸ್. ಅಂಜನೇಯಲು ನೇತೃತ್ವದ ಮುಖಂಡರು ಹೊಸಪೇಟೆ ನಗರದ ವಾಲ್ಮೀಕಿ ಸಮುದಾಯದ ಓಣಿಗಳಲ್ಲಿ ಭರ್ಜರಿ ಪ್ರಚಾರ ಕೈಗೊಂಡರು.

ಬಿಜೆಪಿ ಅಭ್ಯರ್ಥಿ ಆನಂದ್​ ಸಿಂಗ್ ಪರವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು, ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ, ಶಾಸಕ ರಾಜುಗೌಡ, ಎಂಎಲ್ ಸಿ ರವಿಕುಮಾರ, ಮಾಜಿ ಸಂಸದ ಸಣ್ಣ ಫಕ್ಕೀರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಸಿಂಧುವಾಳ ಗುರುಲಿಂಗನಗೌಡ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಹೊಸಪೇಟೆ ನಗರದ ವಿವಿಧ ವಾರ್ಡುಗಳಿಗೆ ಹೋಗಿ ಮತಯಾಚನೆ ಮಾಡಿದ್ರು.

ಜೆಡಿಎಸ್ ಅಭ್ಯರ್ಥಿ ಎನ್.ಎಂ. ನಬಿ ಪರವಾಗಿ ಅವರ ಪುತ್ರ ನೂರ್ ಹಾಗೂ ಜೆಡಿಎಸ್​ನ ಹಿರಿಯ ಮುಖಂಡ ಕೆ. ಕೊಟ್ರೇಶ್​ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಹೊಸಪೇಟೆ ನಗರದ ವಿವಿಧ ವಾರ್ಡ್​ಗಳಲ್ಲಿ ಪಾರಿವಾಳ ಹಾರಿಬಿಡುವ ಮೂಲಕ ಪ್ರಚಾರದಲ್ಲಿ ನಡೆಸಿದರು.

ABOUT THE AUTHOR

...view details