ಬೆಂಗಳೂರು: ವಿಜಯನಗರವನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕೆಂದು ಒತ್ತಾಯಿಸಿ ಉಜೈನಿ ಜಗದ್ಗುರುಗಳು, ಆನಂದ್ ಸಿಂಗ್ ಹಾಗೂ ಕಂಪ್ಲಿ ಗಣೇಶ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಿದರು.
ಬಳಿಕ ಮಾತನಾಡಿದ ಆನಂದ್ ಸಿಂಗ್, ವಿಜಯನಗರವನ್ನು ಜಿಲ್ಲೆ ಮಾಡಬೇಕು ಅನ್ನೋದು ಅಲ್ಲಿನ ಜನಪ್ರಿತಿನಿಧಿಗಳು ಹಾಗೂ ಅಲ್ಲಿನ ಜನರ ಅಭಿಪ್ರಾಯವಾಗಿದೆ. ಇವತ್ತು ನಡೆಯೋ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಮಂಡಿಸಿ ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕು ಅಂತ ಮನವಿ ಮಾಡಿದ್ದೇವೆ ಎಂದರು.
ಉಜೈನಿ ಸದ್ಗುರುಗಳು ಮಾತನಾಡಿ, ವಿಜಯನಗರದ ಗತವೈಭವ ಮರುಕಳಿಸಬೇಕಾದರೆ ಇದನ್ನು ಜಿಲ್ಲೆಯನ್ನಾಗಿ ಮಾಡಬೇಕು. ಇವತ್ತು ಮೈಸೂರು ದಸರಾಕ್ಕೆ ಪ್ರೇರಣೆ ಆಗಿದ್ದು ವಿಜಯನಗರ ಸಾಮ್ರಾಜ್ಯ. ಈ ನೆಲಕ್ಕೆ ಅದರದ್ದೇ ಆದ ವಿಶೇಷ ಗುಣಗಳಿವೆ. ಹಾಗಾಗಿ ಇದನ್ನು ಜಿಲ್ಲೆಯನ್ನಾಗಿ ಮಾಡಬೇಕು ಅಂತ ಮನವಿ ಮಾಡಿದ್ದೇವೆ ಎಂದರು.
ಇದಕ್ಕೆ ಸಿಎಂ ಬಿಎಸ್ವೈ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಎಲ್ಲರು ಪಕ್ಷಾತೀತವಾಗಿ ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕು ಅಂತ ಒತ್ತಾಯ ಮಾಡಿದ್ದೀರಿ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಇದರ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದಿದ್ದಾರೆ ಎಂದರು.