ಹೊಸಪೇಟೆ (ವಿಜಯನಗರ):ನೂತನ ಜಿಲ್ಲೆ ವಿಜಯನಗರದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿಅಧಿಕಾರ ಸ್ವೀಕರಿಸುವ ಮುನ್ನವೇ ಐಎಎಸ್ ಅಧಿಕಾರಿ ಕೆ.ಎಂ.ಗಾಯತ್ರಿ ನೇಮಕ ಆದೇಶವನ್ನು ರದ್ದುಪಡಿಸಲಾಗಿದೆ.
ವಿಜಯನಗರ ಜಿಲ್ಲಾಧಿಕಾರಿಯಾದ ಅನಿರುದ್ಧ ಶ್ರವಣ್ ಅವರಿಗೆ ಜಿಲ್ಲಾ ಪಂಚಾಯಿತಿ ಸಿಇಒ ಹುದ್ದೆಯನ್ನು ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಮುಂದಿನ ಆದೇಶದವರೆಗೆ ಈ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಯೇ ವಹಿಸುವಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕ್ ಆದೇಶದಲ್ಲಿ ತಿಳಿಸಿದ್ದಾರೆ.