ಬಳ್ಳಾರಿ:ಇಲ್ಲಿಯ ವಿಮ್ಸ್ ದುರಂತಕ್ಕೆ ಆಸ್ಪತ್ರೆಯ ನಿರ್ದೇಶಕ ಡಾ.ಗಂಗಾಧರಗೌಡ ಅವರ ನಿರ್ಲಕ್ಷ್ಯವೇ ಕಾರಣ. ಈಗಿರುವ ವಿಮ್ಸ್ ನಿರ್ದೇಶಕರನ್ನು ನೇಮಕಮಾಡುವುದು ಬೇಡ ಎಂದು ಖಚಿತವಾಗಿ ಹೇಳಿತ್ತು. ಆದರೆ, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಪಾರದರ್ಶಕವಾಗಿ ಕೆಲಸ ಮಾಡುತ್ತಾರೆಂದು ಇವರನ್ನು ನೇಮಕ ಮಾಡಿದ್ದಾರೆ. ಇವರಿಗಿಂತ ಅನುಭವಿ ವೈದ್ಯರು ಇದ್ದರು ಎಂದು ಪರೋಕ್ಷವಾಗಿ ಸಚಿವ ಸುಧಾಕರ್ ಕಾರ್ಯವೈಕರಿ ಬಗ್ಗೆ ಶಾಸಕ ಸೋಮಶೇಖರ ರೆಡ್ಡಿ ತಮ್ಮ ಅಸಮಾಧಾನ ಹೊರ ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕರು, ಸಚಿವ ಸುಧಾಕರ್ ಅವರು ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ, ಅವರದೇ ಆದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮ ಎಲ್ಲ ವಿಚಾರಗಳಿಗೆ ಸ್ಪಂದಿಸುತ್ತಾರೆ. ನಮ್ಮ ಸಮಸ್ಯೆ ಪರಿಹರಿಸುತ್ತಾರೆ, ಈಗಿನ ನಿರ್ದೇಶಕರ ಬದಲಾವಣೆ ಮಾಡಬೇಕು ಎಂದು ಸಿಎಂಗೆ ಮನವಿ ಮಾಡುತ್ತೇವೆ. ಅವರನ್ನು ಬದಲಾವಣೆ ಮಾಡಿದರೆ ಒಳ್ಳೆಯದು ಎಂದರು.