ಕರ್ನಾಟಕ

karnataka

ETV Bharat / state

ವೇತನ ತಾರತಮ್ಯ ನೀತಿ ಖಂಡಿಸಿ ವಿಮ್ಸ್ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ - vims hospital

ಈ ಮುಂಚೆ ಸಮಾನ ವೇತನ ಹಂಚಿಕೆ ಮಾಡುತ್ತಿದ್ದ ವಿಮ್ಸ್​ ಇದೀಗ ವೇತನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ನೂರಾರು ವಿಮ್ಸ್​ ನೌಕರರು ಹೊರಗುತ್ತಿಗೆದಾರರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ವಿಮ್ಸ್ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

By

Published : Oct 6, 2019, 12:37 PM IST

ಬಳ್ಳಾರಿ:ವೇತನ ತಾರತಮ್ಯ ನೀತಿ ಖಂಡಿಸಿ ಇಲ್ಲಿನ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಅಡಿ ಕರ್ತವ್ಯ ನಿರ್ವಹಿಸುತ್ತಿದ್ದ ನೂರಾರು ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ವಿಮ್ಸ್ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ವಿಮ್ಸ್ ಆಸ್ಪತ್ರೆಯ ಆವರಣದಲ್ಲಿನ ವಿವಿಧ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೊರಗುತ್ತಿಗೆ ನೌಕರರಿಗೆ ಸಮಾನ ವೇತನ ನೀಡದೆ, ಮನಸೋ ಇಚ್ಛೆಯಂತೆ ವೇತನ ನೀಡುತಿದ್ದಾರೆ.
ಈ ಮೊದಲು ಸಮಾನ ಕೆಲಸಕ್ಕೆ ಸಮಾನ ವೇತನ ನಿಗದಿಪಡಿಸಿದ್ದ ವಿಮ್ಸ್ ಆಸ್ಪತ್ರೆಯ ಆಡಳಿತ ಮಂಡಳಿಯು ಇದೀಗ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ ಎಂದು ಪ್ರತಿಭಟನಾ ನಿರತ ನೌಕಕರು ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿನ ಶೌಚಾಲಯ ಸೇರಿದಂತೆ ಇನ್ನಿತರೆ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ 13,807 ರೂಪಾಯಿ ವೇತನ ನಿಗದಿಪಡಿಸಿದ್ದರೆ, ವೈದ್ಯರ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಕೇವಲ 10,200 ರೂಪಾಯಿ ವೇತನ ನಿಗದಿಪಡಿಸಿದ್ದಾರೆ. ಹಾಗಾಗಿ, ಈ ವೇತನ ತಾರತಮ್ಯದಲ್ಲಾದ ಲೋಪ-ದೋಷಗಳನ್ನು ಸರಿಪಡಿಸಬೇಕೆಂದು ಮಹಿಳಾ ಸಿಬ್ಬಂದಿಯು ಹೊರಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details