ಬಳ್ಳಾರಿ: ಜಿಲ್ಲೆಯಲ್ಲಿ ವೈರಲ್ ಫೀವರ್ ಹೆಚ್ಚಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಸಿಗದೆ ರೋಗಿಗಳು ಪರದಾಡುವ ಸ್ಥಿತಿ ಇದೆ.
ಕಳೆದ 20 ದಿನಗಳಿಂದ ಜಿಲ್ಲೆಯಲ್ಲಿ ವೈರಲ್ ಇನ್ಫೆಕ್ಷನ್ನಿಂದ ಹೆಚ್ಚಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಬೆಡ್ಗಳು ತುಂಬಿ ಹೋಗಿದ್ದು, ಮಕ್ಕಳಿಗೆ ಚಿಕಿತ್ಸೆ ಕೊಡಿಸಲು ಪೋಷಕರು ಆಸ್ಪತ್ರೆ ಆವರಣದಲ್ಲೇ ಕುಳಿತಿದ್ದಾರೆ. ವೈರಲ್ ಫೀವರ್ ಮನೆ ಮನೆಗೂ ವ್ಯಾಪಿಸುತ್ತಿದ್ದು, ಮಕ್ಕಳಲ್ಲಿ ಕಫಾ, ಉಸಿರಾಟ ತೊಂದರೆ ಕಾಣಿಸಿಕೊಳ್ಳುತ್ತಿದೆ.
ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆ ಫುಟ್ಪಾತ್ನಲ್ಲಿ ಕಾಯುತ್ತಿರುವ ಜನರು ಈ ಕುರಿತು ಈಟಿವಿ ಭಾರತದೊಂದಿಗೆ ಜಿಲ್ಲಾ ಆರೋಗ್ಯಾಧಿಕಾರಿ ಜನಾರ್ಧನ್ ಮಾತನಾಡಿ, 'ಸಾಮಾನ್ಯವಾಗಿ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಿನಲ್ಲಿ ಜ್ವರ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ವಿಮ್ಸ್ನಲ್ಲಿ 250 ಬೆಡ್ಗಳ ಸೌಕರ್ಯವಿದೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ಮಕ್ಕಳನ್ನು ಮಲಗಿಸಿರುವುದು ಬೆಡ್ ಸಮಸ್ಯೆಯಿಂದ ಅಲ್ಲ' ಎಂದರು.
ಈಗಾಗಲೇ ಜಿಲ್ಲಾಧಿಕಾರಿ ಜೊತೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಮಕ್ಕಳಿಗೆ ವಿಮ್ಸ್ನಲ್ಲಿ ಚಿಕಿತ್ಸೆ ನೀಡುವ ಸೌಲಭ್ಯವಿದೆ. ಪಾಲಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ: ರಾಜ್ಯದಲ್ಲಿ ಹಂತಹಂತವಾಗಿ ಶಿಕ್ಷಕರ ನೇಮಕಾತಿ: ಸಚಿವ ಮಾಧುಸ್ವಾಮಿ ಭರವಸೆ