ವಿಜಯನಗರ:ಅನಧಿಕೃತವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದ 7 ಜನರನ್ನು ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿಯ ಖಾಸಗಿ ಸರ್ವೇ ಸಂಸ್ಥೆಗೆ ಸೇರಿದ 7 ಜನ ಸಿಬ್ಬಂದಿ ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಅನಧಿಕೃತವಾಗಿ ಮತದಾರರ ಮಾಹಿತಿ ಕಲೆಹಾಕುತ್ತಿದ್ದರು. ಅನುಮಾನಗೊಂಡ ಸ್ಥಳೀಯರು ಗ್ರಾಮೀಣ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ 7 ಜನರನ್ನು ವಶಕ್ಕೆ ಪಡೆದಿದ್ದಾರೆ.
ಈಗಾಗಲೇ ರಾಜ್ಯದ 12 ವಿಧಾನಸಭಾ ಕ್ಷೇತ್ರಗಳಲ್ಲಿ ಈ ತಂಡ ಸಮೀಕ್ಷೆ ನಡೆಸಿದೆ. ಗುಪ್ತಚರ ಸಂಸ್ಥೆಯಿಂದ ಬಂದಿದ್ದೇವೆಂದು ಹೇಳಿಕೊಂಡಿದ್ದ ತಂಡದ ಸದಸ್ಯರು ವಿಧಾನಸಭೆ ಚುನಾವಣೆ ಕುರಿತು ಪ್ರತಿಯೊಬ್ಬರಿಂದ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದಿದ್ದರಂತೆ.