ಬಳ್ಳಾರಿ:ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅವರಿಗೇನಾದ್ರೂ ತಾಕತ್ತಿದ್ದರೆ ನ್ಯಾಯಾಂಗ ತನಿಖೆ ಎದುರಿಸಲಿ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲೆಸೆದಿದ್ದಾರೆ.
ಇದನ್ನೂ ಓದಿ :ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಜನ ರಾಜ್ಯ ಸರ್ಕಾರಕ್ಕೆ ತಕ್ಕ ಉತ್ತರ ನೀಡ್ತಾರೆ : ಉಗ್ರಪ್ಪ
ಬಳ್ಳಾರಿಯ ಕಂಟೋನ್ಮೆಂಟ್ ಏರಿಯಾದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ಚೆಕ್ ಮೂಲಕ ಲಂಚ ಪಡೆದ ಆರೋಪವನ್ನ ಸಿಎಂ ಬಿಎಸ್ವೈ ಎದುರಿಸಿದ್ದರು. ಈಗ ಆರ್ಟಿಜಿಎಸ್ ಮೂಲಕ ಹಣ ಪಡೆದಿರುವ ದಾಖಲೆಗಳಿವೆ. ನಿಮಗೇನಾದ್ರೂ ಯೋಗ್ಯತೆ ಇದ್ದರೆ ನ್ಯಾಯಾಂಗ ತನಿಖೆ ಎದುರಿಸಲು ಸಿದ್ಧರಾಗಿ. ಅಲ್ಲಿ ನೀವು ಭ್ರಷ್ಟಾಚಾರದಲ್ಲಿ ತೊಡಗಿಲ್ಲ ಎಂಬ ಆರೋಪವೇನಾದ್ರೂ ಸಾಬೀತಾದರೆ ನಾನು ನಿಮ್ಮ ಮನೆಯ ಆಳಾಗಿ ದುಡಿಯುವೆ ಎಂದು ಸವಾಲೆಸೆದಿದ್ದಾರೆ.