ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ನದಿಗೆ ಹರಿ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಕಂಪ್ಲಿಯ ಸೇತುವೆ ಮುಳುಗಡೆ ಆಗುವ ಹಂತಕ್ಕೆ ತಲುಪಿದೆ.
ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಕಂಪ್ಲಿ ಸೇತುವೆ ಮುಳುಗಡೆ ಭೀತಿ - Hosapete News
ತುಂಗಭದ್ರಾ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟ ಹಿನ್ನೆಲೆಯಲ್ಲಿ ಕಂಪ್ಲಿಯ ಸೇತುವೆ ಮುಳುಗಡೆ ಹಂತಕ್ಕೆ ಬಂದು ತಲುಪಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕಂಪ್ಲಿ ಸೇತುವೆ ಮುಳುಗಡೆ ಕುರಿತು ವಾಕ್ ಥ್ರೂ
ಈ ಸೇತುವೆ ಕಂಪ್ಲಿ ಹಾಗೂ ಗಂಗಾವತಿಗೆ ಸಂಪರ್ಕ ಕಲ್ಪಿಸುತ್ತದೆ. ಈಗಾಗಲೇ ಮುನ್ನೆಚ್ಚರಿಕಾ ಕ್ರಮವನ್ನು ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲಾಡಳಿತಗಳು ತೆಗೆದುಕೊಂಡಿವೆ. ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಗಂಗಾವತಿ ಭಾಗದಿಂದ ಬರುವ ಭಾರೀ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ.
ಕಂಪ್ಲಿ ಪೊಲೀಸ್ ಠಾಣೆಯ ಸಿಪಿಐ ಹುಲಗಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ, ಸೇತುವೆ ಮೇಲ್ಭಾಗದಲ್ಲಿ ನೀರು ಕಂಡು ಬಂದರೆ ಸಂಚಾರವನ್ನು ನಿಷೇಧಿಸಲು ಸೂಚಿಸಿದ್ದಾರೆ.