ಹೊಸಪೇಟೆ/ವಿಜಯನಗರ: ಜಿಲ್ಲೆಯ ಹರಪನಹಳ್ಳಿಯಲ್ಲಿ ಇಂದು ಮಧ್ಯಾಹ್ನ ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ನೇತೃತ್ವದಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಸಚಿವ ಆನಂದ ಸಿಂಗ್, ನಾಳೆಯಿಂದ ಸೆಮಿ ಲಾಕ್‌ಡೌನ್ ಮಾಡಲಾಗುತ್ತಿದೆ. ಪೂರ್ಣ ಪ್ರಮಾಣದ ಲಾಕ್‌ಡೌನ್ ಮಾಡಲು ನಮಗೆ ಅಧಿಕಾರ ಇಲ್ಲ. ನಾನು ಉಸ್ತುವಾರಿ ಸಚಿವನಾಗಿದ್ರೂ, ನಾನೊಬ್ಬನೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ.
ಪೂರ್ಣ ಪ್ರಮಾಣದ ಲಾಕ್‌ಡೌನ್ ಮಾಡಲು ನಮಗೆ ಅಧಿಕಾರ ಇಲ್ಲ: ಸಚಿವ ಆನಂದ ಸಿಂಗ್ ನಾಳೆ ಪಕ್ಷಾತೀತವಾಗಿ ಎಲ್ಲಾ ಜನಪ್ರತಿನಿಧಿಗಳ ಸಭೆ ಕರೆದಿದ್ದೇವೆ. ಅದ್ರಲ್ಲಿ ಚರ್ಚೆ ಮಾಡಿ, ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಇದೇ ವೇಳೆ ಕೊರೊನಾ ಕಂಟ್ರೋಲ್ಗೆ ಸರ್ಕಾರ ಕಠಿಣ ಕಾನೂನು ಜಾರಿ ಮಾಡಿದೆ. ಜನರು ನಿಯಮ ಪಾಲನೆ ಮಾಡಬೇಕು.
ಜನರು ಅರ್ಥ ಮಾಡಿಕೊಂಡು ಸಹಕಾರ ನೀಡಬೇಕು ಎಂದರು. ಇನ್ನು ರಾಜ್ಯಕ್ಕೆ ಬೇಕಾಗೋ ಆಕ್ಸಿಜನ್ ಜಿಂದಾಲ್ ತಯಾರು ಮಾಡ್ತಾ ಇದೆ. ನಮ್ಮ ರಾಜ್ಯಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ರು.
ಸಂಸದ ವೈ. ದೇವೆಂದ್ರಪ್ಪ, ಹರಪನಹಳ್ಳಿ ಶಾಸಕ ಕರುಣಾಕರ್ ರೆಡ್ಡಿ, ಡಿಸಿ ಪವನ್ ಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್ ಸಭೆಯಲ್ಲಿ ಭಾಗಿಯಾಗಿದ್ದರು.