ಕರ್ನಾಟಕ

karnataka

ETV Bharat / state

ಆರೋಗ್ಯ ಸಚಿವರನ್ನು ಹಲವು ಬಾರಿ ಭೇಟಿ ಮಾಡಿದ್ರೂ ಬೇಡಿಕೆ ಈಡೇರಿಲ್ಲ: ಡಿ.ನಾಗಲಕ್ಷ್ಮೀ - Asha activists news

ಆಶಾ ಕಾರ್ಯಕರ್ತರಿಗೆ ನಿಗದಿತ 12 ಸಾವಿರ ವೇತನ ನೀಡಿ ಸುರಕ್ಷತಾ ಸಾಮಾಗ್ರಿಗಳನ್ನು ಒದಗಿಸಿಬೇಕು ಎಂದು ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಕಳೆದ 11 ದಿನಗಳಿಂದ ಪ್ರತಿಭಟನೆ ಮಾಡಿದ್ದಾರೆ. ಆದರೆ ಸರ್ಕಾರ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ದೂರಿದ್ದಾರೆ.

D. Nagalakshmi
ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ

By

Published : Jul 20, 2020, 4:55 PM IST

Updated : Jul 20, 2020, 5:13 PM IST

ಬಳ್ಳಾರಿ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರನ್ನು ಅನೇಕ ಬಾರಿ ಭೇಟಿ ಮಾಡಿದ್ದೇವೆ. ಅಲ್ಲದೇ ಆಶಾ ಕಾರ್ಯಕರ್ತೆಯರು 11 ದಿನ ಪ್ರತಿಭಟನೆ ನಡೆಸಿದರೂ ಕೂಡ ಬೇಡಿಕೆಗಳು ಇದುವರೆಗೂ ಈಡೇರಿಲ್ಲ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ದೂರಿದ್ದಾರೆ.

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ

ನಗರದ ಖಾಸಗಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮತ್ತು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ನೇತೃತ್ವದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರಿಗೆ ನಿಗದಿತ 12 ಸಾವಿರ ವೇತನ ನೀಡಿ ಸುರಕ್ಷತಾ ಸಾಮಾಗ್ರಿಗಳನ್ನು ಒದಗಿಸಿಬೇಕು ಎಂದು ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು ಕಳೆದ 11 ದಿನಗಳಿಂದ ಪ್ರತಿಭಟನೆ ಮಾಡಿದ್ದಾರೆ. ಆದರೆ ಸರ್ಕಾರ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದರು.

ಆರೋಗ್ಯ ಸಚಿವ ಶ್ರೀರಾಮುಲು ಅವರನ್ನು ಅನೇಕ ಬಾರಿ ಭೇಟಿ ಮಾಡಿದ್ದೇವೆ. ಅವರು ಭರವಸೆ ಮಾತ್ರ ನೀಡಿದ್ದಾರೆ. ಇದುವರೆಗೂ ಯಾವುದೇ ಬೇಡಿಕೆಗಳು ಈಡೇರಿಲ್ಲ. ರಾಜ್ಯದ ವಿವಿಧ ಸಚಿವರಿಗೆ, ಶಾಸಕರಿಗೆ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಮನವಿ ಪತ್ರ ಸಲ್ಲಿಸಿದ್ದಾರೆ. ಅದನ್ನು ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ಅದೇನು ದೊಡ್ಡ ವಿಷಯವಲ್ಲ ಎಂದರು.

Last Updated : Jul 20, 2020, 5:13 PM IST

ABOUT THE AUTHOR

...view details