ಹೊಸಪೇಟೆ: ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿದ ವಾಹನ ಸವಾರಿಗೆ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಇಲ್ಲಿವರೆಗೂ 20 ಬೈಕ್ ಹಾಗೂ ಒಂದು ಕಾರ್ ಜಪ್ತಿ ಮಾಡಿದ್ದಾರೆ.
ಹೊಸಪೇಟೆಯಲ್ಲಿ ವೀಕೆಂಡ್ ಕರ್ಫ್ಯೂ ಉಲ್ಲಂಘನೆ: 20 ಬೈಕ್, ಕಾರು ಜಪ್ತಿ - ಹೊಸಪೇಟೆಯಲ್ಲಿ ವೀಕೆಂಡ್ ಕರ್ಫ್ಯೂ ಉಲ್ಲಂಘನೆ
ವೀಕೆಂಡ್ ಕರ್ಫ್ಯೂ ನಡುವೆಯೂ ಅನಗತ್ಯವಾಗಿ ಸಂಚರಿಸುತ್ತಿದ್ದ 20 ಬೈಕ್ ಹಾಗೂ ಒಂದು ಕಾರ್ನ್ನು ಹೊಸಪೇಟೆ ಪೊಲೀಸರು ಜಪ್ತಿ ಮಾಡಿದ್ದಾರೆ.
ವೀಕೆಂಡ್ ಕರ್ಫ್ಯೂ ಉಲ್ಲಂಘನೆ: 20 ಬೈಕ್, ಕಾರು ಜಪ್ತಿ
ನಗರದ ರೋಟರಿ ವೃತ್ತ ಹಾಗೂ ಅಂಬೇಡ್ಕರ್ ವೃತ್ತದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನ ಸವಾರರನ್ನು ತಡೆದ ಡಿವೈಎಸ್ಪಿ ವಿ.ರಘುಕುಮಾರ ಕೋವಿಡ್ ನಿಯಮಗಳನ್ನು ಗಾಳಿಗೆ ಓಡಾಡುತ್ತಿದ್ದೀರಾ? ಎಂದು ಬೈಕ್ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡರು. ದಂಡವನ್ನು ಪಾವತಿಸಿ ವಾಹನವನ್ನು ಬಿಡಿಸಿಕೊಂಡು ಹೋಗಿ ಎಂದು ಸೂಚನೆ ನೀಡಿದರು.
ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರೂ ಸಹ ನೀವುಗಳು ಓಡಾಡುವುದನ್ನು ನಿಲ್ಲಿಸುವುದಿಲ್ಲ ಉಪವಿಭಾಗಾಧಿಕಾರಿ ಸಿದ್ರಾಮೇಶ್ವರ ವಾಹನ ಸವಾರರನ್ನು ತರಾಟೆಗೆ ತೆಗೆದುಕೊಂಡರು.