ಬಳ್ಳಾರಿ:ಅವಳಿ ಜಿಲ್ಲೆಗಳಲ್ಲಿ ಜೂನ್ 30ರವರೆಗೆ ಮದುವೆ ಸಮಾರಂಭ ಸೇರಿದಂತೆ ಎಲ್ಲ ರೀತಿಯ ಸಾಮಾಜಿಕ ಕಾರ್ಯಕ್ರಮಗಳನ್ನ ನಿಷೇಧಿಸಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರವು ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ವಿಧಿಸಲಾದ ನಿರ್ಬಂಧಗಳನ್ನ ಸಡಿಲಗೊಳಿಸಿ ಜೂನ್ 14ರಿಂದ 21ರವರೆಗೆ ಕೆಲವೊಂದು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ನಿಗದಿಪಡಿಸಿದ ಸಮಯದಲ್ಲಿ ಅನುಮತಿಸಲಾದ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡುತ್ತಾ, ಉಳಿದಂತೆ ಸಾರ್ವಜನಿಕರ ಅನಗತ್ಯ ಓಡಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.