ಬಳ್ಳಾರಿ:ಬೆಳಗಾವಿ ಜಿಲ್ಲೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ತೆರವುಗೊಳಿಸಿದ ಅಧಿಕಾರಿಗಳನ್ನು ಕೂಡಲೇ ರಾಜ್ಯ ಸರ್ಕಾರ ಅಮಾನತುಗೊಳಿಸಬೇಕೆಂದು ಕರ್ನಾಟಕ ಕಾರ್ಮಿಕರ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಶರಣ ಎಂ. ಬಡಿಗೇರ್ ಒತ್ತಾಯಿಸಿದರು.
ರಾಯಣ್ಣ ಪತ್ರಿಮೆ ತೆರವುಗೊಳಿಸಿದವರನ್ನು ಅಮಾನತು ಮಾಡಿ: ಕಾರ್ಮಿಕರ ವೇದಿಕೆ ಒತ್ತಾಯ - ಬಳ್ಳಾರಿ
ಬಳ್ಳಾರಿ ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ಕೆಲಸ ಮಾಡಿ, ಪೌರ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡಿ. ಬೆಳಗಾವಿ ಜಿಲ್ಲೆಯಲ್ಲಿ ಸಂಗೊಳ್ಳಿ ಪ್ರತಿಮೆ ತೆರವುಗೊಳಿಸಿದ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಕಾರ್ಮಿಕ ವೇದಿಕೆ ಒತ್ತಾಯಿಸಿದೆ.

ಕಾರ್ಮಿಕರ ವೇದಿಕೆ
ಕಾರ್ಮಿಕರ ವೇದಿಕೆ ಮುಖಂಡರಿಂದ ಮಾಧ್ಯಮಗೋಷ್ಟಿ
ನಗರದ ಪತ್ರಿಕಾ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ -19 ಆರಂಭವಾದಾಗಿನಿಂದ ಕೂಲಿ ಕಾರ್ಮಿಕರಿಗೆ ಸಾಕಷ್ಟು ಮೂಲಭೂತ ಸೌಲಭ್ಯಗಳು ಸಿಗದೆ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಅದನ್ನು ಪರಿಹರಿಸುವ ಕೆಲಸವನ್ನು ಸರ್ಕಾರ ಮಾಡಬೇಕೆಂದು ಒತ್ತಾಯಿಸಿದರು.
ಬಳ್ಳಾರಿ ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಬೇಕು. ಸರ್ಕಾರವು ಪೌರ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕು. ಕನ್ನಡ ಮಾಧ್ಯಮದ ಮಕ್ಕಳಿಗೆ ಸರ್ಕಾರಿ ಉದ್ಯೋಗ ಸೌಲಭ್ಯ ಕಲ್ಪಿಸಬೇಕು. ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಬರಬೇಕು ಎಂದು ಒತ್ತಾಯಿಸಿದರು.