ಸಿದ್ದರಾಮಯ್ಯ ಬಜೆಟ್‌ನಲ್ಲಿ ಬಳ್ಳಾರಿ ಜಿಲ್ಲೆಗೆ ಅನ್ಯಾಯವಾಗಿದೆ: ಯಶವಂತರಾಜ್ ನಾಗಿರೆಡ್ಡಿ ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯರವರು 14ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದಾರೆ. ಇದೊಂದು ಸಮತೋಲಿತ ಬಜೆಟ್. ಇದರಲ್ಲಿ ರೈತರಿಗೆ ಮತ್ತು ವೈದ್ಯಕೀಯಕ್ಕೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಅದೇ ರೀತಿ ಬೇರೆ ಬೇರೆ ವಲಯಕ್ಕೆ ಒತ್ತು ನೀಡಿದ್ದಾರೆ. ಆದರೆ ಕೈಗಾರಿಕಾ ವಲಯಕ್ಕೆ ಹೆಚ್ಚು ಒತ್ತು ನೀಡಿಲ್ಲ ಎಂದು ಜಿಲ್ಲೆಯ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಯಶವಂತರಾಜ್ ನಾಗಿರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೈಗಾರಿಕೆಗಳು ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳು ಎಷ್ಟು ಸಂಕಷ್ಟಪಡುತ್ತಿವೆ ಎಂದು ಈಗಾಗಲೇ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಶೇ 9ರಿಂದ ನಿಂದ ಶೇ 3ಕ್ಕೆ ಇಂಧನ ತೆರಿಗೆ ಇಳಿಸುವಂತೆ ಮನವಿ ಮಾಡಿದ್ದೆವು. ಆದರೆ ಬಜೆಟ್‌ನಲ್ಲಿ ಈ ಬಗ್ಗೆ ಏನು ಹೇಳಿಲ್ಲ. ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಉತ್ತೇಜನ ಮಾಡಲಿಕ್ಕೆ ಹೆಚ್ಚಿನ ಅನುದಾನ ಮತ್ತು ಪ್ರೋತ್ಸಾಹ ಧನವನ್ನು ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು ಎಂದರು.
ಕಾರಣ ಎಂದರೆ ಬೆಂಗಳೂರಿನಲ್ಲಿ ಕೈಗಾರಿಕೆಗಳ ಒತ್ತಡ ಹೆಚ್ಚಾಗಿದೆ. ಅದನ್ನು ವಿಕೇಂದ್ರೀಕರಣ ಮಾಡಲು ಹೆಚ್ಚಿನ ಅನುದಾನವನ್ನು ಕೈಗಾರಿಕೆಗಳಿಗೆ ನೀಡಿದರೆ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಮುಂಬೈ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆಯಾಗಿ ಬೆಂಗಳೂರಿನ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಆದರೆ ಈ ಬಗ್ಗೆ ಬಜೆಟ್‌ನಲ್ಲಿ ಏನು ಘೋಷಣೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿದರು.
ಕಳೆದ ಮೂರು ವರ್ಷಗಳ ಹಿಂದೆ ಬಜೆಟ್‌ನಲ್ಲಿ ಘೋಷಣೆಯಾಗಿದ್ದ ಮೆಣಸಿನಕಾಯಿ ಮಾರುಕಟ್ಟೆ ಬಗ್ಗೆ ಮಾತನಾಡಿಲ್ಲ. ಆದೇ ರೀತಿ 10 ವರ್ಷ ಕಳೆದರೂ ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಅನುದಾನವನ್ನು ಕೊಟ್ಟಿಲ್ಲ. ಬಳ್ಳಾರಿ ಜಿಲ್ಲೆಗೆ ಅನ್ಯಾಯವಾಗಿದೆ. ಬಜೆಟ್‌ನಲ್ಲಿ ಬಳ್ಳಾರಿ, ವಿಜಯನಗರ, ಗದಗಕ್ಕೆ ಹೆಚ್ಚು ಒತ್ತು ಕೊಡಬೇಕು. ಬಳ್ಳಾರಿಯ ಅಭಿವೃದ್ಧಿಗೆ ಇನ್ನೂ ಹೆಚ್ಚು ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ. ಜೀನ್ಸ್ ಪಾರ್ಕ್ ಬಗ್ಗೆ ಬಜೆಟ್‌ನಲ್ಲಿ ಏನು ಘೋಷಣೆಯಾಗಿಲ್ಲ ಈ ವಿಷಯದಲ್ಲಿ ಬಳ್ಳಾರಿ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಹೇಳಿದ್ದರು.
ಇನ್ನು ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ಬಳ್ಳಾರಿಗೆ ಆಗಮಿಸಿದ್ದ ರಾಹುಲ್ ಗಾಂಧಿಯವರು ಜೀನ್ಸ್ ಅಪರಲ್ ಪಾರ್ಕ್ ಸ್ಥಾಪನೆ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಇದು ಈ ಬಜೆಟ್‌ನಲ್ಲಿ ಘೋಷಣೆಯಾಗುತ್ತದೆ ಎಂದು ಜಿಲ್ಲೆಯ ಜನರ ನಿರೀಕ್ಷೆ ಇತ್ತು. ಆದರೇ ಸಿದ್ದರಾಮಯ್ಯನವರ ಬಜೆಟ್‌ನಲ್ಲಿ ಜೀನ್ಸ್ ಅಪರಲ್ ಪಾರ್ಕ್ ಬಗ್ಗೆ ಪ್ರಸ್ತಾಪವೇ ಮಾಡದಿರುವುದು ನಿರಾಶೆ ಮೂಡಿಸಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ:Watch.. ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ಚಾಮರಾಜನಗರದ ಜನ ಹೇಳಿದ್ದೇನು?
ಸಿಎಂ ಸಿದ್ದರಾಮಯ್ಯ ಬಜೆಟ್ಗೆ 10 ರಲ್ಲಿ 8 ಅಂಕ: ಬಜೆಟ್ ಕುರಿತು ಬೆಂಗಳೂರಿನಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಬಿ ವಿ ಗೋಪಾಲರೆಡ್ಡಿ ಮಾತನಾಡಿ, ಹೊಸ ತೆರಿಗೆ ಯಾವುದೇ ಜಾರಿ ಮಾಡಿಲ್ಲ. ಹೀಗಾಗಿ ಜನರಿಗೆ ಹೊರೆಯಾಗುವ ಸಾಧ್ಯತೆ ಇಲ್ಲ. ಕಲ್ಯಾಣ ಕರ್ನಾಟಕದಲ್ಲಿ ಎಂ.ಎಸ್.ಎಂ.ಇ ಕ್ಲಸ್ಟರ್ ಮಾಡಲು ಬಜೆಟ್‌ನಲ್ಲಿ ಒತ್ತು ಕೊಡಲಾಗಿದೆ. ಸಿಎಂ ಸಿದ್ದರಾಮಯ್ಯ ಬಜೆಟ್ಗೆ 10 ರಲ್ಲಿ 8 ಅಂಕ ಕೊಡಬಹುದು. 9% ನಿಂದ 3%ಗೆ ಇಂಧನ ತೆರಿಗೆ ಇಳಿಸಿ ಎಂದು ಕೇಳಿಕೊಂಡಿದ್ದೆವು. ಅದರ ಬಗ್ಗೆ ಯಾವುದೇ ಉಲ್ಲೇಖ ಬಜೆಟ್‌ನಲ್ಲಿ ಇಲ್ಲ. ಕೈಗಾರಿಕೆಗಳಿಗಾಗಿಯೇ ವಿಶೇಷವಾದ ಪೋರ್ಟಲ್ ರಚನೆಗೆ ಕೇಳಿಕೊಂಡಿದ್ದೆವು. ಅದನ್ನು ಈಡೇರಿಸಲಾಗಿಲ್ಲ ಎಂದು ಹೇಳಿದರು.