ಕರ್ನಾಟಕ

karnataka

ETV Bharat / state

ನಿಯಂತ್ರಣ ಸಿಗದೆ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ ಯುವಕ‌ ಸಾವು - CCTV VIDEO - ಹೊಸಪೇಟೆ ಬೈಕ್​ ಡಿವೈಡರ್​ಗೆ ಡಿಕ್ಕಿ

ವೇಗವಾಗಿ ಬೈಕ್​ ಚಲಾಯಿಸಿಕೊಂಡು ಬಂದ ಯುವಕನೋರ್ವ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಹೊಸಪೇಟೆಯಲ್ಲಿ ಸಂಭವಿಸಿದೆ.

young-man-dead-in-road-accident-cctv-video
ನಿಯಂತ್ರಣ ಸಿಗದೆ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ ಯುವಕ‌ ಸಾವು...CCTV VIDEO

By

Published : Sep 11, 2021, 11:15 AM IST

ಹೊಸಪೇಟೆ(ವಿಜಯನಗರ): ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ ಯುವಕನೋರ್ವ ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಟೋಲ್​ಗೇಟ್ ಬಳಿ ಸಂಭವಿಸಿದೆ.

ಮರಿಯಮ್ಮನಹಳ್ಳಿಯ ಅರುಣ್ (27) ಎಂಬಾತ ಮೃತ ಯುವಕ ಎಂದು ತಿಳಿದುಬಂದಿದೆ. ಈತ ವೇಗವಾಗಿ ಬೈಕ್​ ಚಲಾಯಿಸಿಕೊಂಡು ಬಂದಿದ್ದು, ನಿಯಂತ್ರಣ ಸಿಗದೆ ಡಿವೈಡರ್​ಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ವಿಡಿಯೋ

ಘಟನೆಯ ದೃಶ್ಯವು ಟೋಲ್​ಗೇಟ್​ನಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ರೈಸ್ ಪುಲ್ಲಿಂಗ್ ದಂಧೆ: ಆಂಧ್ರ ಮೂಲದ ದಂಪತಿ ಸೇರಿ 6 ಜನರ ಬಂಧನ

ABOUT THE AUTHOR

...view details