ಬೀದರ್:ಬಸವಣ್ಣನ ಕರ್ಮ ಭೂಮಿ, 12ನೇ ಶತಮಾನದಲ್ಲಿ ವಚನಗಳ ಕ್ರಾಂತಿ ಮಾಡಿ ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಅನುಭವ ಮಂಟಪ ನಿರ್ಮಾಣಕ್ಕೆ ಮೊದಲ ಹಂತವಾಗಿ ಬಜೆಟ್ನಲ್ಲಿ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ರಂಗಮಂದಿರ ನಾಮಕರಣ ಸಮಾರಂಭದಲ್ಲಿ ಮಾತನಾಡಿದ ಅವರು, ಗೊ.ರು ಚನ್ನಬಸವ ಸಮಿತಿ ಜಿಲ್ಲೆಯ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ 600 ಕೋಟಿ ರೂ ಬೇಡಿಕೆ ಇಟ್ಟಿದೆ. ಅದರಂತೆ 100 ಕೋಟಿ ರೂ ಬಿಡುಗಡೆ ಮಾಡಲಾಗುವುದು ಎಂದರು.