ಬಸವಕಲ್ಯಾಣ:ಅನ್ನ ಭಾಗ್ಯ ಯೋಜನೆಯಡಿ ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿಯನ್ನು ಲಾರಿಯಲ್ಲಿ ಅಕ್ರಮವಾಗಿ ಹೊರ ರಾಜ್ಯಕ್ಕೆ ಸಾಗಿಸುತ್ತಿದ್ದ 270 ಲಕ್ಷ ರೂ. ಮೌಲ್ಯದ 100 ಕ್ವಿಂಟಾಲ್ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪಡಿತರ ಅಕ್ಕಿಯನ್ನು ಲಾರಿಯಲ್ಲಿ ಲೋಡ್ ಮಾಡಿಕೊಂಡು ಕಲಬುರಗಿಯಿಂದ ಉಜಳಂಬ ಮಾರ್ಗವಾಗಿ ಮಹಾರಾಷ್ಟ್ರದ ಉಮ್ಮಾರ್ಗಾ ಕಡೆ ಸಾಗುತ್ತಿತ್ತು. ಉಜಳಂಬ ಗ್ರಾಮದ ಬಳಿ ದಾಳಿ ನಡೆಸಿದ ಅಧಿಕಾರಿಗಳ ತಂಡ, 10 ಟನ್ ಅಕ್ಕಿ ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.