ಕರ್ನಾಟಕ

karnataka

ETV Bharat / state

ಹುಲ್ಯಾಳ-ಚಿಮ್ಮೆಗಾಂವ್ ರಸ್ತೆಗೆ 11 ಕೋಟಿ ರೂ. ಪ್ರಸ್ತಾವನೆ: ಇದು ಈಟಿವಿ ಭಾರತ ಇಂಪ್ಯಾಕ್ಟ್ - ಇದು ಈಟಿವಿ ಭಾರತ್ ಇಂಪ್ಯಾಕ್ಟ್

ಈಟಿವಿ ಭಾರತ ಸುದ್ದಿ ನೋಡಿ ಎಚ್ಚೆತ್ತುಕೊಂಡ ಲೋಕೋಪಯೋಗಿ ಒಳನಾಡು ಬಂದರು ಇಲಾಖೆ ಅಧಿಕಾರಿಗಳು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಅನುದಾನದ ಅಡಿಯಲ್ಲಿ 8 ಕಿಲೋ ಮೀಟರ್ ರಸ್ತೆ ಅಭಿವೃದ್ಧಿಗೆ 11 ಕೋಟಿ ರೂಪಾಯಿ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ.

11 crore Proposed Hulayala-Chimmegaon Road ETV Bharat Impact
ಹುಲ್ಯಾಳ-ಚಿಮ್ಮೆಗಾಂವ್ ರಸ್ತೆಗೆ 11 ಕೋಟಿ ರೂ. ಪ್ರಸ್ತಾವನೆ, ಇದು ಈಟಿವಿ ಭಾರತ್ ಇಂಪ್ಯಾಕ್ಟ್

By

Published : Aug 9, 2020, 4:41 PM IST

ಬೀದರ್:ಜಿಲ್ಲೆಯಅಂತಾರಾಜ್ಯ ಹೆದ್ದಾರಿಯಲ್ಲಿ ಅಪಾಯದ ಪ್ರಯಾಣ ಮಾಡ್ತಿದ್ದ ಪ್ರಯಾಣಿಕರ ಪ್ರಾಣ ಸಂಕಟಕ್ಕೆ ಮುಕ್ತಿ ಸಿಕ್ಕಿದ್ದು, 11 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಪಿಡಬ್ಲ್ಯೂಡಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.

ಜಿಲ್ಲೆಯ ಔರಾದ್ ತಾಲೂಕಿನ ಹುಲ್ಯಾಳ ಗ್ರಾಮದಿಂದ ಕಮಲನಗರ ತಾಲೂಕಿನ ಚಿಮ್ಮೆಗಾಂವ್ ಗ್ರಾಮದ ನಡುವಿನ ರಾಜ್ಯ ಹೆದ್ದಾರಿ 122 ರ ಅಂದಾಜು 8 ಕಿಲೋ ಮೀಟರ್ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿತ್ತು. ಈ ಕುರಿತು 'ಹದಗೆಟ್ಟ ಹೆದ್ದಾರಿ, ಪ್ರಯಾಣಿಕರ ಪ್ರಾಣ ಸಂಕಟ' ಶೀರ್ಷಿಕೆಯಡಿ 'ಈಟಿವಿ ಭಾರತ' ನಲ್ಲಿ ವಿಸ್ತೃತ ವರದಿ ಪ್ರಸಾರವಾಗಿತ್ತು.

ಬೀದರ್: ಹದಗೆಟ್ಟ ಹೆದ್ದಾರಿ... ಪ್ರಯಾಣಿಕರಿಗೆ ಪ್ರಾಣ ಸಂಕಟ...!

ಈಟಿವಿ ಭಾರತ ಎಚ್ಚೆತ್ತುಕೊಂಡ ಲೋಕೋಪಯೋಗಿ ಒಳನಾಡು ಬಂದರು ಇಲಾಖೆ ಅಧಿಕಾರಿಗಳು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಅನುದಾನದ ಅಡಿಯಲ್ಲಿ 8 ಕಿಲೋ ಮೀಟರ್ ರಸ್ತೆ ಅಭಿವೃದ್ಧಿಗೆ 11 ಕೋಟಿ ರೂಪಾಯಿ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ.

ಹುಲ್ಯಾಳ-ಚಿಮ್ಮೆಗಾಂವ್ ರಸ್ತೆಗೆ 11 ಕೋಟಿ ರೂ. ಪ್ರಸ್ತಾವನೆ, ಇದು ಈಟಿವಿ ಭಾರತ ಇಂಪ್ಯಾಕ್ಟ್

ಮಹಾರಾಷ್ಟ್ರ- ತೆಲಂಗಾಣ ರಾಜ್ಯಕ್ಕೆ ನೇರ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಇದಾಗಿದ್ದು, ಈ ನಡುವಿನ 8 ಕಿ.ಮೀ ಉದ್ದದ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿ ಪ್ರಯಾಣಿಕರು ರಸ್ತೆ ಅಪಘಾತಕ್ಕೊಳಗಾಗಿ ಆಸ್ಪತ್ರೆ ಸೇರುತ್ತಿದ್ದರು. ಸುಗಮ ಸಂಚಾರಕ್ಕೆ ದಾರಿ ಮಾಡಿಕೊಡಬೇಕಾದ ಇಲಾಖೆಯ ಗಮನ ಸೆಳೆಯುವಲ್ಲಿ ಈಟಿವಿ ಭಾರತ ಯಶಸ್ವಿಯಾಗಿದ್ದು, ಕಳೆದ ಹಲವು ವರ್ಷಗಳಿಂದ ಸಂಕಟಕ್ಕೆ ಸಿಲುಕಿದ ಪ್ರಯಾಣಿಕರ ನೋವಿಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇವೆ.

ABOUT THE AUTHOR

...view details