ಬಸವಕಲ್ಯಾಣ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಮತದಾನ ಮಾಡಲೆಂದು ಮಹಾರಾಷ್ಟ್ರದ ಪೂನಾದಿಂದ ಆಗಮಿಸುತಿದ್ದ ವೇಳೆ ಕಾರ್ ಪಲ್ಟಿಯಾಗಿ ಮತದಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗ್ರಾಪಂ ಚುನಾವಣೆಗೆ ಮತದಾನ ಮಾಡಲು ಬರುತಿದ್ದವರ ಕಾರ್ ಪಲ್ಟಿ : 11 ಜನರಿಗೆ ಗಾಯ
ಇಂದು ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಮಧ್ಯದ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ..
ಇಲ್ಲಿನ ರಾಷ್ಟ್ರೀಯ ಹೆದ್ದಾರಿ-65ರ ಮೇಲಿರುವ ಉಮ್ಮಾಪೂರ ಕ್ರಾಸ್ ಬಳಿ ಇನ್ನೋವಾ ಕಾರ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳೆಲ್ಲರೂ ಔರಾದ್ ತಾಲೂಕಿನ ರಕ್ಷಾಳ (ಕೆ)ಗ್ರಾಮದವರಾಗಿದ್ದು, 11 ಜನರ ಪೈಕಿ ಪಪ್ಪು ಗಾಯಕವಾಡ (32), ಸಾತಮ್ಮಾ ಗಾಯಕವಾಡ(30) ಹಾಗೂ ವಾಹನ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಬಸವಕಲ್ಯಾಣ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿದ ಮೇಲೆ ಹೆಚ್ಚಿನ ಚಿಕಿತ್ಸೆಗೆ ಬೀದರ್ನ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇಂದು ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಮಧ್ಯದ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.