ಬೀದರ್:ಮಹಾರಾಷ್ಟ್ರದಿಂದ ವಾಪಸಾದವರಿಂದ ಕೊರೊನಾ ಸೋಂಕು ಕಂಟಕವಾಗಿ ಪರಿಣಮಿಸಿದೆ. ಇಂದು ಮತ್ತೆ 12 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯ ಸೋಂಕಿತರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.
ಬೀದರ್ನಲ್ಲಿ ಮುಂದುವರೆದ 'ಮಹಾ' ಕಂಟಕ: ಇಂದು ಮತ್ತೆ 12 ಜನರಲ್ಲಿ ಕೊರೊನಾ ಪತ್ತೆ! - corona update
ಬೀದರ್ ಜಿಲ್ಲೆಯಲ್ಲಿ ಇಂದು ಬಿಡುಗಡೆಯಾದ ಹೆಲ್ತ್ ಬುಲೆಟಿನ್ನಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ 11 ಜನ ಸೇರಿ ಒಟ್ಟು 12 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಲಾಗಿದೆ.

ಬಸವಕಲ್ಯಾಣ ತಾಲೂಕಿನ ಕೊಹಿನೂರು, ಶಿರಗುರ, ಗದಲೆಗಾಂವ್(ಕೆ), ಬಟಗೇರಾ, ಲಾಡವಂತಿ ಹಾಗೂ ಅಟ್ಟೂರ ಗ್ರಾಮಗಳಲ್ಲಿ ಕೋವಿಡ್-19 ಅಟ್ಟಹಾಸ ಮುಂದುವರೆದಿದೆ. ಈ ಪೈಕಿ 11 ಜನ ಮಹಾರಾಷ್ಟ್ರದಿಂದ ವಾಪಸಾದವರಾಗಿದ್ದು, ಇವರೆಲ್ಲರು ಸ್ಥಳೀಯ ಕ್ವಾರಂಟೈನ್ಗೆ ಒಳಗಾಗಿದ್ದರು.
ಬಸವಕಲ್ಯಾಣ ತಾಲೂಕಿನ ಶಿರಗುರ ಗ್ರಾಮದ ಕ್ವಾರಂಟೈನ್ನಲ್ಲಿ ಮಹಾರಾಷ್ಟ್ರದಿಂದ ಬಂದ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ಪಿ-2318, 20 ವರ್ಷದ ಯುವಕನಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರ ಜೊತೆಗೆ ಇಂದು ಜಿಲ್ಲಾ ಕೊರೊನಾ ಆಸ್ಪತ್ರೆಯಲ್ಲಿ ಮೂವರು ಗುಣಮುಖರಾಗಿದ್ದಾರೆ ಎಂದು ತಿಳಿಸಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 107ಕ್ಕೆ ಏರಿಕೆಯಾದರೆ, ಗುಣಮುಖರಾದವರ ಸಂಖ್ಯೆ 24ಕ್ಕೆ ಏರಿದೆ. ಇಬ್ಬರು ಸಾವನ್ನಪ್ಪಿದ್ದು, ಉಳಿದ 81 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.