ಬೀದರ್:ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಮಾಣಿಕ ಗುಂಡಪ್ಪ ಜ್ಯಾಂತೆ ಎಂಬಾತ ತನ್ನ ಗದ್ದೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆ ಬೆಳೆಯುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. ಅಂದಾಜು 5 ರಿಂದ 8 ಅಡಿ ಉದ್ದ ಬೆಳೆದ 145 ಕೆಜಿ ಗಾಂಜಾ ಬೆಳೆಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.