ಬಸವಕಲ್ಯಾಣ: ಅನ್ನಭಾಗ್ಯ ಯೋಜನೆಯಡಿ ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿ ಇಡಲಾಗಿದ್ದ ಗೋಡೌನ್ ಮೇಲೆ ದಾಳಿ ಮಾಡಿದ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳ ತಂಡ ಸುಮಾರು 3.45 ಲಕ್ಷ ಮೌಲ್ಯದ 115 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ ಘಟನೆ ನಗರದಲ್ಲಿ ನಡೆದಿದೆ.
ನಗರದ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಅಂಗಡಿ ಹೊಂದಿದ ಆರೋಪಿಗಳು, ಸಾರ್ವಜನಿಕರಿಂದ ಕಡಿಮೆ ಬೆಲೆಯಲ್ಲಿ ಪಡಿತರ ಅಕ್ಕಿ ಖರೀದಿಸಿ, ಕಾಳ ಸಂತೆಗೆ ಮಾರಾಟ ಮಾಡುವ ಕೆಲಸದಲ್ಲಿ ನಿರತರಾಗಿದ್ದರು ಎನ್ನುವ ಮಾಹಿತಿ ಆಧಾರದ ಮೇಲೆ ಗೋಡೌನ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 115 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ್ದಾರೆ.