ಬಸವಕಲ್ಯಾಣ: ಅನ್ನ ಭಾಗ್ಯ ಯೋಜನೆಯ ಅಕ್ಕಿಗೆ ಕನ್ನ ಹಾಕುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಬಡವರ ಹೊಟ್ಟೆ ಸೇರಬೇಕಿದ್ದ 250 ಕ್ವಿಂಟಾಲ್ ಅಕ್ಕಿಯನ್ನು ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದಾಗ ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬಸವಕಲ್ಯಾಣ: ಕಾಳ ಸಂತೆಗೆ ಸಾಗಿಸುತ್ತಿದ್ದ 250 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ - 250 quintal of rice siege in basavakalyan
ಅನ್ನ ಭಾಗ್ಯದ ಅಕ್ಕಿಗೆ ಕನ್ನ ಹಾಕಲಾಗುತ್ತಿದೆ. ಬಡವರ ಹೊಟ್ಟೆ ಸೇರಬೇಕಿದ್ದ 250 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಅನ್ಯ ರಾಜ್ಯಕ್ಕೆ ಸಾಗಿಸುತ್ತಿದ್ದಾಗ ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬಸವಕಲ್ಯಾಣ: ಕಾಳ ಸಂತೆಗೆ ಸಾಗಿಸುತಿದ್ದ 25 ಟನ್ ಪಡಿತರ ಅಕ್ಕಿ ಜಪ್ತಿ
ಹೈದ್ರಾಬಾದ್-ಮುಂಬೈ ಮಾರ್ಗದ ರಾಷ್ಟ್ರೀಯ ಹೆದ್ದಾರಿ-65 ರಿಂದ ಹುಮನಾಬಾದ್ ಕಡೆಯಿಂದ ಲಾರಿಯಲ್ಲಿ ಅಕ್ಕಿ ಸಾಗಿಸುವಾಗ ಸಸ್ತಾಪುರ ಬಂಗ್ಲಾ ಸಮೀಪದ ಮುಡಬಿ ಕ್ರಾಸ್ ಬಳಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಲಾರಿ ಚಾಲಕ ಅವಿನಾಶ್ ಧೂಳೆ ಸಹಿತ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಕಾಳ ಸಂತೆಯಲ್ಲಿ ಮಾರಾಟ ಮಾಡಲೆಂದು ಯಾದಗಿರಿಯಿಂದ ಮಹಾರಾಷ್ಟ್ರ ಕಡೆ ಅಕ್ಕಿ ಸಾಗಿಸಲಾಗುತಿತ್ತು ಎನ್ನಲಾಗ್ತಿದೆ. ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jun 18, 2020, 4:08 PM IST